ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ
ಜಿಲ್ಲಾ ಬಿಜೆಪಿ ಕಚೇರಿ
ಉಡುಪಿ: ನಗರದ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಡೆದ 67ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕಿರಣ್ ಕುಮಾರ್ ಕೊಡ್ಗಿ, ಗೀತಾಂಜಲಿ ಸುವರ್ಣ, ಸಂಧ್ಯಾ ರಮೇಶ್, ಯಶ್‌ಪಾಲ್ ಸುವರ್ಣ, ಬಿ.ರವಿ ಅಮೀನ್, ನಳಿನಿ ಪ್ರದೀಪ್ ರಾವ್, ಕುತ್ಯಾರು ನವೀನ್ ಶೆಟ್ಟಿ, ರಾಘವೇಂದ್ರ ಉಪ್ಪೂರು, ಶಿಲ್ಪಾಜಿ.ಸುವರ್ಣ ಮುಂತಾದವರು ಉಪಸ್ಥಿತರಿದ್ದರು.
ಮಣಿಪಾಲ ಮಾಧವಕೃಪಾ ಶಾಲೆ
ಮಣಿಪಾಲ: ಇಲ್ಲಿನ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಣಿಪಾಲ ಇಂಟಗ್ರೇಟೆಡ್ ಸರ್ವಿಸಸ್‌ನ ಮ್ಯಾನೇಜರಂ ಲೆ.ಕರ್ನಲ್ ನಾಗೇಶ್ ಒಕುಣ್ಣಾಯ ವರು ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಶಾಲೆಯ ಸಂಚಾಲಕ ಪಿ.ಜಿ.ಪಂಡಿತ್, ಪ್ರಾಂಶುಪಾಲೆ ಜೆಸ್ಸಿ ಆಂಡ್ರೂ, ಉಪಪ್ರಾಂಶುಪಾಲೆ ಶಕಿಲಾಕ್ಷಿ ಕೃಷ್ಣನ್, ಜ್ಯೋತಿ ಸಂತೋಷ್, ಮುಖ್ಯೋಪಾಧ್ಯಾಯಿನಿ ಉಮಾಕೆ.ರಾವ್ ಹಾಗೂ ಇತರರು ಉಪಸ್ಥಿತರಿದ್ದರು.
ನಿಟ್ಟೂರು ಪ್ರೌಢಶಾಲೆ
ಉಡುಪಿ: ನಿಟ್ಟೂರು ಪ್ರೌಢಶಾಲೆಯ ಗಣರಾಜೋತ್ಸವ ದಿನಾಚರಣೆಯಲ್ಲಿ ಭುವನಪ್ರಸಾದ ಹೆಗ್ಡೆ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ದಿನದ ಮಹತ್ವ ತಿಳಿಸಿದರು. ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ಅತಿಥಿಗಳನ್ನು ಸ್ವಾಗತಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಪರಿಸರವನ್ನು ವಿದ್ಯಾರ್ಥಿಗಳ ನೆರವಿನೊಂದಿಗೆ ಸ್ವಚ್ಚಗೊಳಿಸಲಾಯಿತು. ಶಿಕ್ಷಕ-ಶಿಕ್ಷಕೇತರರು ಉಪಸ್ಥಿತರಿದ್ದರು.
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 67ನೇಯ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಅಂಸಾಡಿ ಧ್ವಜಾರೋಹಣ ನೆರವೇರಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಎಂ. ಕಾರ್ಯಕ್ರಮ ನಿರ್ವಹಿಸಿದರು.
ಒಳಕಾಡು ಸರಕಾರಿ ಪ್ರೌಢ ಶಾಲೆ
ಉಡುಪಿ: ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ನಗರಸಭೆ ಸದಸ್ಯ ಗೀತಾ ರವಿ ಶೇಟ್ ದ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿ ನಚಿಕೇತ ಪ್ರಜಾಪ್ರಭುತ್ವದ ಮಹತ್ವದ ಕುರಿತು ಮಾತನಾಡಿದ. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ನಾಗಭೂಷಣ ಶೇಟ್, ಸದಸ್ಯರಾದ ರವಿರಾಜ್ ನಾಯಕ್, ಉಮೇಶ್ ನಾಯಕ್, ಮಾಧವ ಆಚಾರ್ಯ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕುಸುಮ ಮತ್ತಿತರರು ಉಪಸ್ಥಿತರಿದ್ದರು.
ವಾಸುದೇವ ಕೃಪಾ ಶಾಲೆ
ಉಡುಪಿ: ಮಣಿಪಾಲ ಅಕಾಡೆಮಿಯ ಅಂಗಸಂಸ್ಥೆ ಉಡುಪಿ ಬೈಲೂರಿನ ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವನ್ನು ಶಾಲಾ ಸಂಚಾಲಕ ಕೆ. ಅಣ್ಣಪ್ಪ ಶೆಣೈ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಮಾಜಿ ಯೋಧ ಜಗ್ನನಾಥ ಬಂಗೇರ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಕ ಕಿಶೋರ್‌ರಾಜ್ ನಿರ್ದೇಶನದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಉಡುಪಿ: ಮಣಿಪಾಲ ಅಕಾಡೆಮಿಯ ಅಂಗಸಂಸ್ಥೆ ಉಡುಪಿ ಬೈಲೂರಿನ ವಾಸುದೇವ ಕೃಪಾ ಆಂಗ್ಲಮ್ಯಾಮಶಾಲೆಯಲ್ಲಿಗಣರಾಜ್ಯೋತ್ಸವನ್ನುಶಾಲಾಸಂಚಾಲಕಕೆ.ಅಣ್ಣಪ್ಪಶೆಣೈಅ್ಯಕ್ಷತೆಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಮಾಜಿ ಯೋಜಗ್ನನಾಥಬಂಗೇರ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಕ ಕಿಶೋರ್‌ರಾಜ್ ನಿರ್ದೇಶನದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಶಾಲಾ ಸಮನ್ವಯಾಧಿಕಾರಿ ಯು.ಕಲ್ಯಾಣಿ ಪೈ, ಮುಖ್ಯೋಪಾಧ್ಯಾಯಿನಿ ಅಮಿತಾಂಜಲಿ ಕೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಿಯಾ ಎ ನಾಯಕ್, ಶಾಲಾ ನಾಯಕ ಸನತ್ ಉಪಸ್ಥಿತರಿದ್ದರು. ಗಣರಾಜ್ಯೋತ್ಸವದ ಅಂಗವಾಗಿ ಜರಗಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಿಂಡಿಕೇಟ್ ಬ್ಯಾಂಕ್ ಮಣಿಪಾಲ
ಮಣಿಪಾಲ: ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕ್‌ನ ಮಣಿಪಾಲದ ಪ್ರಧಾನ ಕಚೇರಿಯಲ್ಲಿ 67ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಹಿರಿಯ ಜನರಲ್ ಮ್ಯಾನೇಜರ್ ಕೆ.ಟಿ.ರೈ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳ್ಮಣ್ ಸ್ಕೂಲ್
ಬೆಳ್ಮಣ್ ಸಂತ ಜೋಸ್ೆ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂಚಾಲಕ ವಂ. ಲಾರೆನ್ಸ್ ಬಿ. ಡಿಸೋಜ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರು ವಂ. ಜೆ.ಬಿ.ಮೊರಾಸ್, ಕಾನ್ವೆಂಟ್‌ನ ಮುಖ್ಯಸ್ಥೆ ಸಿಸ್ಟರ್ ಉಷಾಸ್ಟೆಲ್ಲಾ, ಹಿರಿಯ ಪ್ರಾ.ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಲೂಸಿ ಪಿರೇರಾ, ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಅನಿತಾ ಕಮಲಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ, ಗೌರವ ವಂದನೆ, ದೇಶಭಕ್ತಿ ಗೀತೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು