ಸುದಾನ ವಸತಿಯುತ ಶಾಲಾ ಬೆಳ್ಳಿಹಬ್ಬ ಕಾರ್ಯಕ್ರಮ ಉದ್ಘಾಟನೆ
ಪುತ್ತೂರು, ಜ.26: : ಪುತ್ತೂರಿನ ಸುದಾನ ವಸತಿಯುತ ಶಾಲಾ ಬೆಳ್ಳಿಹಬ್ಬ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಮಂಗಳವಾರ ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ಪುಲಸ್ತ್ಯಾ ರೈ, ದ.ಕ. ಜಿಲ್ಲಾ ಶಿಕ್ಷಣಾಧಿಕಾರಿ ವೈ. ಶಿವರಾಮಯ್ಯ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಸುದಾನ ವಸತಿ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್, ಸುದ್ದಿ ಸಮೂಹ ಸಂಸ್ಥೆಯ ಡಾ. ಯು.ಪಿ. ಶಿವಾನಂದ್, ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಯ ಸಂಚಾಲಕ ಸೀತಾರಾಮ ರೈ, ಕೆ. ಶಿಕ್ಷಣ ತಜ್ಞ ಸುಕುಮಾರ ಗೌಡ, ಯಕ್ಷಗಾನ ಕಲಾವಿದ ಕೆ.ಎಚ್.ದಾಸಪ್ಪರೈ, ಕುದ್ಕಾಡಿ ವಿಶ್ವನಾಥ ರೈ, ಆಡಳಿತ ಮಂಡಳಿ ಕಾರ್ಯದರ್ಶಿ ಪೀಟರ್ ವಿಲ್ಸನ್ ಪ್ರಭಾಕರ್, ಬೆಳ್ಳಿ ಹಬ್ಬ ಸಮಿತಿಯ ಉಪಾಧ್ಯಕ್ಷ, ವಿವೇಕಾನಂದ ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಆರ್ಥಿಕ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಸುದರ್ಶನ್ ವಿ., ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್ ಎಂ., ಮುಖ್ಯಶಿಕ್ಷಕ ಶೋಭಾ ನಾಗರಾಜ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರಿಶಿತಾ ಗೇಥಿಯಾ ಮತ್ತಿತರರು ಉಪಸ್ಥಿತರಿದ್ದರು. ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಸ್ವಾಗತಿಸಿದರು.