ಕಡಬ: ಜೂನಿಯರ್ ಜೇಸಿ ವತಿಯಿಂದ ತರಬೇತಿ ಕಾರ್ಯಕ್ರಮ
Update: 2016-01-27 15:07 IST
ಕಡಬ: ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಮತ್ತು ಯುವ ಜೇಸಿ ವಿಭಾಗ ಜೇಸಿಐ ಕಡಬ ಕದಂಬದ ವತಿಯಿಂದ ದ್ವಿತೀಯ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೆ ನಾಯಕತ್ವ ಮತ್ತು ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆ ತರಬೇತಿ ಕಾರ್ಯಕ್ರಮವು ಕಡಬದ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಮಧ್ಯಾಹ್ನ ನಡೆಯಿತು.
ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೇಸಿ. ಸೀತಾರಾಮ ಕೇವಳ ತರಬೇತಿ ನೀಡಿದರು.
ಕಡಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.