×
Ad

​ಮಂಗಳೂರು : ‘ಭಾರತದಲ್ಲಿ ಪ್ರಜಾಪ್ರಭುತ್ವದ ಭವಿಷ್ಯ’ ನಾಳೆ ಟೀಸ್ತಾ ಸೆಟಲ್ವಾಡ್‌ರಿಂದ ಭಾಷಣ

Update: 2016-01-27 22:31 IST

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್

ಮಂಗಳೂರು , ಜ. 27: ಮುಸ್ಲಿಂ ಲೇಖಕರ ಸಂಘದ ವತಿಯಿಂದ ಜನವರಿ 29ರಂದು ಸಂಜೆ 6:45ಕ್ಕೆ ನಗರದ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ‘ಭಾರತದಲ್ಲಿ ಪ್ರಜಾಪ್ರಭುತ್ವದ ಭವಿಷ್ಯ’ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

ಈ ಸಂದರ್ಭದಲ್ಲಿ ದಿವಂಗತ ಯು.ಟಿ.ಫರೀದ್ ಸ್ಮರಣಾರ್ಥ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಹಾಗೂ ಹಿರಿಯ ಮುಸ್ಲಿಂ ಸಾಹಿತಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ.

ಆರೋಗ್ಯ ಸಚಿವ ಯು.ಟಿ.ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭದಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು, ಕವಿಗಳಾದ ದಯಾನಂದ ಕತ್ತಲ್ಸಾರ್, ಮುಹಮ್ಮದ್ ಬಡ್ಡೂರು, ಜ್ಯೋತಿ ಚೇಳ್ಯಾರು, ಅಬ್ದುಸ್ಸಲಾಂ ಮದನಿ, ಜಲೀಲ್ ಮುಕ್ರಿ ಮತ್ತು ಆಯಿಶಾ ಯು.ಕೆ. ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಉಮರ್ ಯು.ಎಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News