×
Ad

ಚಿಕಿತ್ಸೆಗಾಗಿ ರಾಜ್ಯಕ್ಕೆ ಆಗಮಿಸಿದ ಕೇಜ್ರಿವಾಲ್ ದಂಪತಿ

Update: 2016-01-27 23:59 IST

ಬೆಂಗಳೂರು, ಜ.27: ಕೆಮ್ಮು ಹಾಗೂ ಮಧುಮೇಹದಿಂದ ಬಳಲುತ್ತಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತನ್ನ ಪತ್ನಿ ಸುನೀತಾ ಕೇಜ್ರಿವಾಲ್‌ರೊಂದಿಗೆ ಬುಧವಾರ ಮಧ್ಯಾಹ್ನ 2:30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು ಎಂದು ರಾಜ್ಯ ಆಪ್ ಸಂಚಾಲಕ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.


‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಅವರು, ಕೆಮ್ಮು ಹಾಗೂ ಮಧುಮೇಹದಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 10 ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು ಎಂದರು.


ಆಮ್ ಆದ್ಮಿ ಪಕ್ಷ(ಆಪ್)ದಿಂದ ಜ.31ರಂದು ನಗರದಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ ಎಂದು ರವಿಕೃಷ್ಣಾ ರೆಡ್ಡಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News