ಸೇವಾಭೂಷಣ ಪ್ರಶಸ್ತಿ ಪ್ರದಾನ
ಉಡುಪಿ, ಜ.28: ಯಕ್ಷಗಾನ ಕಲಾರಂಗದಲ್ಲಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣರ ಹೆಸರಿನಲ್ಲಿ ನಿಷ್ಠಾವಂತ ಸಾಮಾಜಿಕ ಕಾರ್ಯಕರ್ತರಿಗೆ ನೀಡುವ ಪುರಸ್ಕಾರ ‘ಸೇವಾಭೂಷಣ ಪ್ರಶಸ್ತಿ’ಯನ್ನು ಈ ಬಾರಿ ಹಿರಿಯ ಸಾಹಿತ್ಯ ಪರಿಚಾರಕರಾದ ಕು.ಗೋ. (ಎಚ್.ಗೋಪಾಲ ಭಟ್)ರಿಗೆ ಬುಧವಾರ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ.ಗಣೇಶ ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸತ್ಯಸಾಯಿ ಮಂದಿರದ ಶಿವಪ್ರಸಾದ್ ಶೆಟ್ಟಿಗಾರ್ ಗೋಪಾಲಕೃಷ್ಣರ ಸಂಸ್ಮರಣ ಭಾಷಣ ಮಾಡಿದರು. ಸಮಾರಂಭದಲ್ಲಿ ಕಲಾರಂಗದ ಉಪಾಧ್ಯಕ್ಷ ಎಂ.ಗಂಗಾಧರ ರಾವ್, ಪಿ. ಕಿಶನ್ ಹೆಗ್ಡೆ, ಕಾರ್ಯದರ್ಶಿ ಮುರಲಿ ಕಡೆಕಾರ್ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ನೀಲಾವರ ಸುರೇಂದ್ರ ಅಡಿಗರನ್ನು ಗೌರವಿಸಲಾಯಿತು. ಚಂದ್ರಶೇಖರ ಕೆದ್ಲಾಯ ಪ್ರಾರ್ಥಿಸಿದರು. ಪ್ರೊ.ಸದಾಶಿವ ರಾವ್ ವಂದಿಸಿದರು. ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರೂಪಿಸಿದರು