ಬಿಡಬ್ಲುಎಫ್ ರ್ಯಾಂಕಿಂಗ್: ಸಿಂಧುಗೆ ಭಡ್ತಿ
Update: 2016-01-28 23:34 IST
ಹೊಸದಿಲ್ಲಿ, ಜ.28: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಗುರುವಾರ ಬಿಡುಗಡೆಯಾಗಿರುವ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್‌ನ(ಬಿಡಬ್ಲುಎಫ್) ಸಿಂಗಲ್ಸ್ ರ್ಯಾಂಕಿಂಗ್‌ನಲ್ಲಿ 11ನೆ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.
ಸಿಂಧು ಸಹ ಆಟಗಾರ್ತಿ ಸೈನಾ ನೆಹ್ವಾಲ್ ದ್ವಿತೀಯ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಪುರುಷರ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್ ಹಾಗೂ ಎಚ್.ಎಸ್. ಪ್ರಣಯ್ ಕ್ರಮವಾಗಿ 9 ಹಾಗೂ 20ನೆ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹಾಲಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಪಿ.ಕಶ್ಯಪ್ 14ನೆ ಸ್ಥಾನಕ್ಕೇರಿದ್ದಾರೆ. ಮುಂಬೈನ ಅಜಯ್ ಜಯರಾಮ್ ನಾಲ್ಕು ಸ್ಥಾನ ಕಳೆದುಕೊಂಡು 25ನೆ ಸ್ಥಾನದಲ್ಲಿದ್ದಾರೆ.