ಮೂಡುಪಡುಕೋಡಿ: ಹಳೆ ಆರೋಪಿ ಸೆರೆ
Update: 2016-01-28 23:44 IST
ಬಂಟ್ವಾಳ, ಜ. 28: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ಕೌಟುಂಬಿಕ ಘರ್ಷಣೆ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಬಂಧಿಸಿದ ಘಟನೆ ಬುಧವಾರ ನಡೆದಿದೆ. ಆರೋಪಿಯನ್ನು ಸ್ಥಳೀಯ ನಿವಾಸಿ ಪೌಲ್ ಡಿಸೋಜ ಎಂದು ಗುರುತಿಸಲಾಗಿದೆ. ಈತನು 1995ರಲ್ಲಿ ಕೌಟುಂಬಿಕ ಘರ್ಷಣೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮನೆಗೆ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿದ ಬಳಿಕ ಪರಾರಿಯಾಗಿದ್ದನು ಎನ್ನಲಾಗಿದೆ. ಠಾಣಾಧಿಕಾರಿ ಲತೇಶ್ ಕುಮಾರ್ ನೇತೃತ್ವದಲ್ಲಿ ದೇವಪ್ಪ ಎಂ.ಕೆ. ಮತ್ತು ಹರೀಶ್ ಎಚ್.ಜಿ. ಮತ್ತಿತರ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.