ಮಂಗಳೂರು : ನಗರಪ್ರದೇಶದಲ್ಲಿ ಮಲೇರಿಯ ತಡೆಗೆ ವಿಶೇಷ ತಂಡ ರಚನೆ:ಜಿಲ್ಲಾಧಿಕಾರಿ ಸೂಚನೆ
ಮಂಗಳೂರು,ಜ.29:ನಗರದಲ್ಲಿ ಮಲೇರಿಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ 60ವಾರ್ಡ್‌ಗಳಲ್ಲಿ ವಿಶೇಷ ತಂಡ ರಚಿಸಿ ಕಟ್ಟಡ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಕಾರಿ ಎ.ಬಿ.ಇಬ್ರಾಹಿಂ ಆದೇಶಿಸಿದರು. ದಕ್ಷಿಣ ಕನ್ನಡ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಲೇರಿಯಾ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದಲ್ಲಿ ಬಹುಮಹಡಿ ಮಾತ್ರವಲ್ಲದೆ ಸಣ್ಣ ಮನೆ ನಿರ್ಮಾಣ ಕಾಮಾಗಾರಿ ನಡೆಯುವ ಪ್ರದೇಶಕ್ಕೂ ಭೇಟಿ ಮಾಡಿ ಪರಿಶೀಲನೆ ಮಾಡಿ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ನಗರದಲ್ಲಿ ಶೇ.20ರಷ್ಟು ಮಲೇರಿಯ ಪ್ರಕರಣ ಹೆಚ್ಚಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಂಡ ಬಗ್ಗೆ ಮುಂದಿನ 15 ದಿನದಲ್ಲಿ ನಡೆಯುವ ಸಭೆಯಲ್ಲಿ ವರದಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಆರೋಗ್ಯ ಇಲಾಖೆಯ ಸರ್ವೇಯಲೆನ್ಸ್ ಅಕಾರಿ ಡಾ.ಅರುಣ್ ಕುಮಾರ್ ಮಾತನಾಡಿ, ಪ್ರತಿ ತಿಂಗಳು ಸರ್ವೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಹೆಚ್ಚುವರಿ ಜಿಲ್ಲಾಕಾರಿ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಓ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಆರೋಗ್ಯಾಕಾರಿ ಡಾ.ರಾಮಕೃಷ್ಣ ರಾವ್, ಮಂಗಳೂರು ಮಹಾ ನಗರ ಪಾಲಿಕೆ ಉಪ ಆಯುಕ್ತ ಗೋಕುಲ್ದಾಸ್ ನಾಯಕ್ ಉಪಸ್ಥಿತರಿದ್ದರು.