×
Ad

ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಪರಮೇಶ್ವರ್

Update: 2016-01-29 23:11 IST

ಬೆಂಗಳೂರು, ಜ. 29: ಹೆಬ್ಬಾಳ ಕ್ಷೇತ್ರದ ಉಪ ಚುನಾ ವಣಾ ಅಭ್ಯರ್ಥಿ ರೆಹಮಾನ್ ಶರೀಫ್ ನೆಪಮಾತ್ರ. ಅಲ್ಲಿ ಸ್ಪರ್ಧಿಸಿರುವುದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ. ಹೀಗಾಗಿ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಬೆಂಗಳೂರು ನಗರದ ಸಚಿವರು- ಶಾಸಕರ ಸಭೆಯಲ್ಲಿ ಮಾತನಾ ಡಿದ ಅವರು, ಉಪ ಚುನಾವಣೆ 2018ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಭಿನ್ನಾಭಿಪ್ರಾಯ ಗಳನ್ನು ಮರೆತು ಕೆಲಸ ಮಾಡಬೇಕೆಂದು ಹೇಳಿದ್ದಾರೆಂದು ಗೊತ್ತಾಗಿದೆ.
ಪಕ್ಷದ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದು, ಹೆಬ್ಬಾಳ ಉಪ ಚುನಾವಣೆಯಲ್ಲಿ ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಪಕ್ಷದ ಪರವಾಗಿ ಶ್ರಮಿಸಬೇಕು. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಬೇಕು ಎಂದು ತಿಳಿಸಿದ್ದಾರೆಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳ ಕಾಟವೇ ಹೆಚ್ಚಿದ್ದು, ಚುನಾವಣಾ ಸಂದರ್ಭ ದಲ್ಲಿ ಕೆಲವರು ಜೆಡಿಎಸ್ ಮತ್ತಿತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸೋಲಿಗೆ ಒಳಸಂಚು ರೂಪಿಸುತ್ತಿದ್ದು, ಅಂತಹವರ ಬಗ್ಗೆ ಎಚ್ಚರಿಕೆಯಿಂದಿ ರಬೇಕೆಂದು ಪರಮೇಶ್ವರ್ ಸಲಹೆ ಮಾಡಿದರು.
ಕ್ರಮ ನಿಶ್ಚಿತ: ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿ ಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡುವ ವ್ಯಕ್ತಿಗಳು ಯಾರೇ ಇದ್ದರೂ, ಅವರು ಎಷ್ಟೇ ದೊಡ್ಟವರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗು ವುದು ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆಂದು ಗೊತ್ತಾಗಿದೆ.
ಗೆಲುವಿಗೆ ಸಹಕರಿಸಿ: ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಕೆ.ಜಾಫರ್ ಶರೀಫ್, ಸೋನಿಯಾ ಗಾಂಧಿ ರಾಜಕೀಯವಾಗಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಹೀಗಾಗಿ ಅವರಿಗೆ ನನ್ನ ಬೆಂಬಲವಿರುತ್ತದೆ. ಹೆಬ್ಬಾಳದಿಂದ ನನ್ನ ಮೊಮ್ಮಗನಿಗೆ ಟಿಕೆಟ್ ನೀಡಿರುವುದು ಸೋನಿಯಾರ ಸೂಕ್ತ ನಿರ್ಧಾರಕ್ಕೆ ಸಾಕ್ಷಿ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು. ತಮಗೆ ವಹಿಸಿರುವ ಜವಾಬ್ದಾರಿಯನ್ನು ಎಲ್ಲರೂ ನಿಭಾಯಿಸಿದರೆ ಗೆಲುವು ಸುಲಭ ಎಂದು ತಿಳಿಸಿದ್ದಾರೆಂದು ತಿಳಿದು ಬಂದಿದೆ.
ಕಾರ್ಯತಂತ್ರ: ಬಳ್ಳಾರಿ ವಿಧಾನಸಭಾ ಉಪ ಚುನಾ ವಣೆಯೂ ಸವಾಲಾಗಿತ್ತು. ಆ ವೇಳೆ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರ ಒಗ್ಗಟ್ಟು ಮತ್ತು ಕಾರ್ಯತಂತ್ರ ಪಕ್ಷದ ಗೆಲುವಿಗೆ ಮುಖ್ಯ ಕಾರಣವಾಗಿತ್ತು ಎಂದು ಹೆಬ್ಬಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಆಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.
ಬಳ್ಳಾರಿಯಲ್ಲಿ ಅನುಸರಿಸಿದ ಕಾರ್ಯತಂತ್ರವನ್ನು ಹೆಬ್ಬಾಳದಲ್ಲಿಯೂ ರೂಪಿಸಿ, ಬೂತ್ ಮತ್ತು ವಾರ್ಡ್ ಮಟ್ಟದ ಉಸ್ತುವಾರಿ ನಾಯಕರು ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಯಾವುದೇ ಸಂದರ್ಭದ ಲ್ಲಿಯೂ ಅಪಸ್ವರ ಸಲ್ಲ. ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಕೆಲಸ ಮಾಡಬೇಕು ಎಂದು ಡಿಕೆಶಿ ಸಲಹೆ ಮಾಡಿದ್ದಾರೆಂದು ತಿಳಿದು ಬಂದಿದೆ.
ಹೆಬ್ಬಾಳ ಉಪ ಚುನಾವಣೆ ಗೆಲ್ಲಲು ಜೆಡಿಎಸ್ ಅಭ್ಯರ್ಥಿಯನ್ನು ಹಾಕಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸುವುದು ಅವರ ಮುಖ್ಯಗುರಿ. ಹೀಗಾಗಿ ಜೆಡಿಎಸ್ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ಅಗತ್ಯ. ಜ.30ರಿಂದ ಕ್ಷೇತ್ರದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.
ಹೆಬ್ಬಾಳ ಟಿಕೆಟ್ ವಂಚಿತ ಅಭ್ಯರ್ಥಿ ಬೈರತಿ ಸುರೇಶ್ ಅವರೊಂದಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚಿಸಿದ್ದು, ಮನವೊಲಿಸಿದ್ದಾರೆ. ಅವರೂ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿದ್ದು, ಎಲ್ಲ ಮುಖಂಡರು ಒಗ್ಗಟಿನಿಂದ ಕೆಲಸ ಮಾಡಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಸಚಿವ ರೋಷನ್ ಬೇಗ್ ಮಾತನಾಡಿ, ಹೆಬ್ಬಾಳ ಉಪ ಚುನಾವಣೆಯನ್ನು ಕೇವಲ ಅಲ್ಪಸಂಖ್ಯಾತರ ಮತಗಳಿಂದ ಗೆಲ್ಲಲು ಸಾಧ್ಯವಿಲ್ಲ. ಎಲ್ಲ ಸಮುದಾಯಗಳ ಒಗ್ಗೂಡಿಸಿ ಕೆಲಸ ಮಾಡಬೇಕು. ಪಕ್ಷದ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು ಎಂದು ಗೊತ್ತಾಗಿದೆ.
 ಸಭೆಯಲ್ಲಿ ಹೆಬ್ಬಾಳ ಅಭ್ಯರ್ಥಿ ರೆಹಮಾನ್ ಶರೀಫ್, ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ, ಶಾಸಕರಾದ ಭೈರತಿ ಬಸವರಾಜ್, ಆರ್.ವಿ.ವೆಂಕಟೇಶ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

‘ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆಗೆ ರೆಹಮಾನ್ ಶರೀಫ್‌ಗೆ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದು, ತಮ್ಮ ಮಧ್ಯದಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದೇ ನಮ್ಮ ಸಿದ್ಧಾಂತ’
-ರಿಝ್ವನ್ ಅರ್ಷದ್, ಯುವ ಕಾಂಗ್ರೆಸ್ ಅಧ್ಯಕ್ಷ

ಮಾಜಿ ಪ್ರಧಾನಿ ದೇವೇಗೌಡರ ಜತೆ ತಾನು ಯಾವುದೇ ಮಾತುಕತೆ ನಡೆಸಿಲ್ಲ. ನಾನು ಕಾಂಗ್ರೆಸ್ಸಿಗ, ಇತರ ಪಕ್ಷಗಳೊಂದಿಗೆ ಕೆಲಸ ಮಾಡುವ ಅಗತ್ಯ ನನಗಿಲ್ಲ. ಗೌಡರಿಗೆ ಪತ್ರ ಬರೆದಿದ್ದೇನೆಂಬ ಆರೋಪ ಸತ್ಯಕ್ಕೆ ದೂರ. ದೇವೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾರೆ’
-ಸಿ.ಕೆ.ಜಾಫರ್ ಶರೀಫ್, ಕಾಂಗ್ರೆಸ್ಸಿನ ಹಿರಿಯ ಮುಖಂಡ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News