×
Ad

ಅನುಪಮಾ ವರ್ಗಾವಣೆ ಆಡಳಿತಾತ್ಮಕ ವಿಷಯ: ಸಿದ್ದರಾಮಯ್ಯ

Update: 2016-01-29 23:16 IST

ಬೆಂಗಳೂರು, ಜ. 29: ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶಣೈ ಅವರ ವರ್ಗಾವಣೆ ಇಲಾಖೆ ಆಡಳಿತಾತ್ಮಕ ವಿಷಯವಾಗಿದ್ದು, ಅದನ್ನೆ ನೆಪ ಮಾಡಿಕೊಂಡು ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕೆ ವಿರುದ್ಧ ಆರೋಪ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಪಮಾ ಶಣೈ ಅವರು ಒಂದು ವರ್ಷದಿಂದ ಕೂಡ್ಲಿಗಿಯಲ್ಲೆ ಕೆಲಸ ಮಾಡುತ್ತಿದ್ದು, ಅವರನ್ನು ಆಡಳಿತಾತ್ಮಕ ಕಾರಣಗಳಿಗಾಗಿ ಇಲಾಖೆಯ ಹಿರಿಯ ಅಧಿಕಾರಿಗಳೇ ಬೇರೆ ಕಡೆ ವರ್ಗಾವಣೆ ಮಾಡಿದ್ದಾರೆ ಎಂದು ಸ್ಪಷ್ಟಣೆ ನೀಡಿದರು. ವರ್ಗಾವಣೆ ವಿಚಾರವನ್ನೇ ಮುಂದಿಟ್ಟುಕೊಂಡು ಕಾರ್ಮಿಕ ಸಚಿವ ಪರಮೇಶ್ವರ್ ನಾಯ್ಕಾ ಅವರ ತಪ್ಪುಗಳನ್ನು ಹುಡುಕುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಸಿದ್ದರಾಮಯ್ಯ, ಮರಳು ದಂಧೆಯಲ್ಲಿ ಅವರು ಪಾಲ್ಗೊಂಡಿದ್ದಾರೆಂಬ ಆರೋಪ ಸರಿಯಲ್ಲ. ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News