×
Ad

ಪುರುಷರ ಸಿಂಗಲ್ಸ್: ಮರ್ರೆ ಫೈನಲ್‌ಗೆ

Update: 2016-01-29 23:45 IST

ಮೆಲ್ಬೋರ್ನ್, ಜ.29: ಕೆನಡಾದ ಮಿಲೊಸ್ ರಾವೊನಿಕ್‌ರನ್ನು 5 ಸೆಟ್‌ಗಳ ಅಂತರದಿಂದ ಮಣಿಸಿರುವ ಬ್ರಿಟನ್‌ನ ಆ್ಯಂಡಿ ಮರ್ರೆ ಆಸ್ಟ್ರೇಲಿಯನ್ ಓಪನ್‌ನ ಪುರುಷರ ಸಿಂಗಲ್ಸ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಶುಕ್ರವಾರ ಇಲ್ಲಿ 4 ಗಂಟೆ, 3 ನಿಮಿಷಗಳ ಕಾಲ ನಡೆದ ಸೆಮಿ ಫೈನಲ್‌ನಲ್ಲಿ ವಿಶ್ವದ ನಂ.2ನೆ ಆಟಗಾರ ಮರ್ರೆ ಅವರು ರಾವೊನಿಕ್‌ರನ್ನು 4-6, 7-5, 6-7(4), 6-4, 6-2 ಸೆಟ್‌ಗಳ ಅಂತರದಿಂದ ಮಣಿಸಿದರು.

ಆಸ್ಟ್ರೇಲಿಯನ್ ಓಪನ್‌ನಲ್ಲಿ 4 ಬಾರಿ ರನ್ನರ್-ಅಪ್ ಆಗಿರುವ ಮರ್ರೆ ಐದನೆ ಬಾರಿ ಫೈನಲ್‌ಗೆ ತಲುಪಿದ್ದು, ವಿಶ್ವದ ನಂ.1 ಆಟಗಾರ ನೊವಾಕ್ ಜೊಕೊವಿಕ್‌ರನ್ನು ಎದುರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News