ನಾವೂರು: ಬ್ರಹ್ಮಕಲಶಾಭಿಷೇಕ ಮಹೋತ್ಸವ
ಬೆಳ್ತಂಗಡಿ, ಜ.29: ಬದುಕಿನ ಸಾರ್ಥಕತೆಗೆ ಧರ್ಮದ ಆಶ್ರಯ ಆಗತ್ಯ ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ನಾವೂರು ಶ್ರೀ ಗೋಪಾಲಕೃಷ್ಣ ದೇವರ ನೂತನ ಶಿಲಾಮಯ ದೇವಾಲಯದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದಲ್ಲಿ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಆಶೀರ್ವಚನ ನೀಡಿದರು.
ಅಖಿಲ ಭಾರತೀಯ ಕುಟುಂಬ ಪ್ರಭೋಧನ ಪ್ರಮುಖ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಮಾರ್ಗದರ್ಶಕ ಮಾಣಿಲಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಬರೋಡ ತುಳು ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಮಾತನಾಡಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಉಜಿರೆ ಶ್ರೀಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಯು. ವಿಜಯರಾಘವ ಪಡ್ವೆಟ್ನಾಯ, ಬಂಗಾಡಿ ಅರಮನೆ ರವಿರಾಜ ಬಲ್ಲಾಳ್, ಪಡಂಗಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಯೋಗೀಶ್ ಕುಮಾರ್ ನಡಕರ, ಬಂಗಾಡಿ ಸಹಸ್ರನಾಗಬ್ರಹ್ಮ ಸನ್ನಿಧಿ ಆಡಳಿತ ಮೊಕ್ತೇಸರ ತಿಮ್ಮಪ್ಪಗೌಡ ಬೆಳಾಲು, ಪಿಲ್ಯ ಬೀಡು ಕೇಶವ ಗೊಲ್ಲ, ನಾಗೇಶ್ ಎಂ., ಸಾಮ್ರಾಟ್ ಕರ್ಕೆರ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜಾ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ಬಿ. ಉಮೇಶ್, ಪ್ರಧಾನ ಕಾರ್ಯದರ್ಶಿ ಹರೀಶ್ ಕಾರಿಂಜ, ಗೌರವಾಧ್ಯಕ್ಷ ಸುಕುಮಾರ್ ಜೈನ್ ವೇದಿಕೆಯಲ್ಲಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಪ್ರದೀಪ್ ನಾವೂರು ಸ್ವಾಗತಿಸಿದರು. ಸತೀಶ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ವಿಷ್ಣು ಶರ್ಮ ಪ್ರಾರ್ಥಿಸಿದರು. ಮೋಹನ ಬಂಗೇರ ವಂದಿಸಿದರು.