×
Ad

ಇಂದಿನಿಂದ ‘ಭಯೋತ್ಪಾದನೆ ವಿರುದ್ಧ ಜಿಹಾದ್’ ಜನಾಂದೋಲನ

Update: 2016-01-30 00:25 IST

ಉಡುಪಿ, ಜ.29: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ‘ಭಯೋತ್ಪಾದನೆ ವಿರುದ್ಧ ಜಿಹಾದ್’ ಎಂಬ ಹೆಸರಿನಲ್ಲಿ ಬೃಹತ್ ಜನಾಂದೋಲನವನ್ನು ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಎ.ಅಬ್ದುರ್ರಹ್ಮಾನ್ ಕಲ್ಕಟ್ಟ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಉಗ್ರವಾದಿಯೊಬ್ಬನ ಗುಂಡೇಟಿಗೆ ಬಲಿಯಾದ ಜ.30ರ ಹುತಾತ್ಮರ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಸ್ತುತ ಜನಾಂದೋಲನವನ್ನು ಘೋಷಿಸಲಾಗುವುದು. ಸಂಘಟನೆಯ ಶಾಖೆಗಳು, ಮಸೀದಿ, ಮದ್ರಸಗಳಲ್ಲಿ ಭಯೋತ್ಪಾದನೆ ಕುರಿತು ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳು, ಸಾರ್ವಜನಿಕ ಸಭೆ, ವಿಚಾರ ಸಂಕಿರಣ, ಜಾಗೃತಿ ಜಾಥಾಗಳನ್ನು ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಇಲ್ಯಾಸ್ ನಾವುಂದ, ರಾಜ್ಯ ಸಮಿತಿ ಸದಸ್ಯ ಜಿ.ಎಂ.ಸಿರಾಜುದ್ದೀನ್ ಸಖಾಫಿ ಕನ್ನಂಗಾರು, ಜಿಲ್ಲಾ ಅಧ್ಯಕ್ಷ ಪಿ.ಎಂ.ಮುಹಮ್ಮದ್ ಅಶ್ರಫ್ ಅಂಜದಿ, ಪ್ರಧಾನ ಕಾರ್ಯದರ್ಶಿ ಅಬ್ದುರ್ರವೂಫ್ ಖಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News