×
Ad

ಜ್ವರ: ಮುಖ್ಯಮಂತ್ರಿ ಸಿದ್ದರಾಮಯ್ಯರ ನಿಗದಿತ ಕಾರ್ಯಕ್ರಮಗಳು ರದ್ದು

Update: 2016-01-30 11:15 IST

ಬೆಂಗಳೂರು, ಜ.30: ಮುಖ್ಯ ಮಂತ್ರಿ ಸಿದ್ದರಾಮಯ್ಯ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ  ಇಂದು ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಶುಕ್ರವಾರ ರಾತ್ರಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ಜ್ವರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಅವರು ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಜ್ವರ, ಗಂಟಲು ನೋವು, ಮೈಕೈ ನೋವಿನಿಂದ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ.ಕುಟುಂಬದ ವೈದ್ಯರು ಅವರಿಗೆ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News