ಮುಖ್ಯಮಂತ್ರಿಗೆ ಜ್ವರ, ವಿಶ್ರಾಂತಿ
ಬೆಂಗಳೂರು, ಜ. 30: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಪ್ರಚಾರದ ಭರಾಟೆ ರಂಗೇ ರುತ್ತಿದ್ದು, ಪ್ರಚಾರದ ಮುಂಚೂಣಿಯಲ್ಲಿರಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ವರದಿಂದ ಹಾಸಿಗೆ ಹಿಡಿದಿದ್ದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.
ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುತಾತ್ಮ ದಿನಾ ಚರಣೆ ಸೇರಿದಂತೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ತೀವ್ರ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರ ಮಗಳನ್ನು ರದ್ದುಪಡಿಸಿದರು. ಅಲ್ಲದೆ, ಕುಟುಂಬದ ವೈದ್ಯ ರಾದ ಡಾ.ರವಿಕುಮಾರ್ ಅವರಿಂದ ಪರೀಕ್ಷೆ ಮಾಡಿಸಿ, ಅಗತ್ಯ ಚಿಕಿತ್ಸೆಯನ್ನು ಪಡೆದು ಕೊಂಡರು. ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಎಲ್ಲ ಕಾರ್ಯ ಕ್ರಮಗಳನ್ನು ಬದಿಗೊತ್ತಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲು ತೀರ್ಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಯಲ್ಲಿದ್ದಾರೆ.
ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜ.31ರಂದು ಬೆಳಗ್ಗೆ 11ಗಂಟೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಚಾರ ಸಭೆ ನಿಗದಿಯಾಗಿದ್ದು, ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖುದ್ದು ಚಾಲನೆ ನೀಡಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಪ್ರಚಾರ ಸಭೆಗೂ ಭಾಗ ವಹಿಸುವ ಸಾಧ್ಯತೆಗಳು ಕಡಿಮೆ ಎಂದು ತಿಳಿದು ಬಂದಿದೆ.