ಬೆಂಗಳೂರು; ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನಾಳೆಗೆ 10 ವರ್ಷ
Update: 2016-02-01 18:55 IST
ಬೆಂಗಳೂರು.ಫೆ.1: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನಾಳೆ 10 ವರ್ಷಗಳನ್ನು ಪೂರೈಸುತ್ತಿದ್ದು, ಕೇಂದ್ರ ಸರ್ಕಾರ ಇದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರಾಮೀಣ ಉದ್ಯೋಗ ಯೋಜನೆಯಾದ ನರೇಗಾದ ದಶಕದ ಸಾಧನೆ ಒಂದು ರಾಷ್ಟ್ರೀಯ ಹೆಮ್ಮೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮುಂಬರುವ ವರ್ಷಗಳಲ್ಲಿ ಈ ಯೋಜನೆಯನ್ನು ಇನ್ನಷ್ಟು ಸರಳಗೊಳಿಸಿ, ಬಲಪಡಿಸುವತ್ತ ಹೆಚ್ಚಿನ ಗಮನಹರಿಸಲಾಗುವುದು, ಆರ್ಥಿಕ ದುರ್ಬಲ ವರ್ಗದ ಹಿತದೃಷ್ಟಿಯಿಂದ ಈ ಯೋಜನೆಯನ್ನು ಸುಸ್ಥಿರಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
–ಈ ಸಂದರ್ಭದಲ್ಲಿ ನಾಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ದೆಹಲಿಯಲ್ಲಿ ನರೇಗಾ ಸಮ್ಮೇಳನ್ 2016ನ್ನು ಉದ್ದೇಶಿಸಿ ಪ್ರಮುಖ ಭಾಷಣ ಮಾಡಲಿದ್ದು, ಕೆಲವು ಪ್ರಕಟಣೆಗಳನ್ನು ಹೊರಡಿಸುವ ನಿರೀಕ್ಷೆ ಇದೆ.