×
Ad

ಮಂಗಳೂರು ; ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳ ವಶ

Update: 2016-02-01 22:30 IST

 ಮಂಗಳೂರು,ಫೆ.1: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ರವಿವಾರದಂದು ವಿವಿಧೆಡೆ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕಣ್ಣೂರು ಗ್ರಾಮದ ಬಳಿ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಒಂದು ವಾಹನವನ್ನು ವಶಪಡಿಸಿಕೊಂಡು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವಶಕ್ಕೆ ನೀಡಿ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ ತಾಲ್ಲೂಕು ಕಲ್ಲಡ್ಕ ಗ್ರಾಮದ ಬಳಿ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಒಂದು ವಾಹನವನ್ನು ವಶಪಡಿಸಿಕೊಂಡು ಬಂಟ್ವಾಳ ನಗರ ಪೊಲೀಸ್ ಠಾಣೆಯ ವಶಕ್ಕೆ ನೀಡಿ ಪ್ರಕರಣವನ್ನು ದಾಖಲಿಸಲಾಗಿದೆ.
ಮಂಗಳೂರು ತಾಲ್ಲೂಕು ಕರ್ನೀರೆ ಗ್ರಾಮದ ಬಳಿ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡು ಮುಲ್ಕಿ ಪೊಲೀಸ್ ಠಾಣೆಯ ವಶಕ್ಕೆ ನೀಡಲಾಗಿದೆ.
               ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಕೆ.ಎಸ್.ನಾಗೇಂದ್ರಪ್ಪ, ಎಸ್.ಎನ್.ಗಿರೀಶ್‌ಮೋಹನ್, ಬಿ.ಕೆ.ಮೂರ್ತಿ ಮತ್ತು ಎಸ್.ಮಹದೇವಪ್ಪ ಹಾಗೂ ವಾಹನ ಚಾಲಕರಾದ ಚನ್ನಪ್ಪ ಮತ್ತು ಕೇಶವ ರವರುಗಳು ಕಾರ್ಯಾಚರಣೆ ನಡೆಸಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News