ಡಿವೈಎಸ್ಪಿ ಅನುಪಮಾ ಶೆಣೈ ವರ್ಗಾವಣೆ ರದ್ದು
Update: 2016-02-01 22:36 IST
ಬೆಂಗಳೂರು, ಫೆ.1: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಅನುಪಮಾ ಶೆಣೈ ವರ್ಗಾವಣೆ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ರದ್ದುಗೊಳಿಸಿದೆ.
ಅನುಪಮಾ ಶೆಣೈರನ್ನು ಕೂಡ್ಲಿಗಿ ಉಪ ವಿಭಾಗದಿಂದ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿದ ಸರಕಾರದ ಕ್ರಮಕ್ಕೆ ವಿರೋಧ ಪಕ್ಷಗಳು, ಸಾರ್ವಜನಿಕ ವಲಯ ಹಾಗೂ ಆಡಳಿತ ಪಕ್ಷದ ಪ್ರಮುಖ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವರ್ಗಾವಣೆಯನ್ನು ರದ್ದುಗೊಳಿಸಲಾಗಿದೆ.