×
Ad

ಕೊಂಕಣಿ ಸಾಹಿತ್ಯ ಕೃತಿಗೆ ಪ್ರಶಸ್ತಿ: ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Update: 2016-02-01 22:37 IST

ಬೆಂಗಳೂರು, ಫೆ.1: ಕನ್ನಡ ಲಿಪಿಯ ಮೂಲಕ ರಚಿಸಲಾಗುವ ಕೊಂಕಣಿ ಸಾಹಿತ್ಯ ಕೃತಿಗಳನ್ನು ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಗಳಿಗೆ ಪರಿಗಣಿಸಬೇಕು ಎಂಬ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಕರ್ನಾಟಕ ರಾಜ್ಯ ಕೊಂಕಣಿ ಭಾಷಾ ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯ ಮೂರ್ತಿ ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠವು ಸೋಮವಾರ ವಿಲೇವಾರಿ ಮಾಡಿತು.
    ದೇವನಾಗರಿ ಲಿಪಿಯ ಸಾಹಿತ್ಯ ವನ್ನು ಮಾತ್ರವೇ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡಮಿ ಸಲ್ಲಿಸಿರುವ ಆಕ್ಷೇಪಣೆ ಸರಿ ಇದೆ. ಹೀಗಾಗಿ, ಲಿಪಿಯೇ ಇಲ್ಲದ ಭಾಷೆಗಳಿಗೆ ಪ್ರಶಸ್ತಿ ನೀಡಿ ಎಂದು ನಾವು ತಾನೆ ಹೇಗೆ ನಿರ್ದೇಶಿಸಲು ಸಾಧ್ಯ ಎಂದು ಪ್ರಶ್ನಿಸಿದ ಪೀಠವು ಅರ್ಜಿದಾರರ ಕೋರಿಕೆಯನ್ನು ತಿರಸ್ಕರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News