×
Ad

108 ಸಿಬ್ಬಂದಿಗೆ ಸಚಿವರ ಗಡುವು

Update: 2016-02-01 23:48 IST

ಬೆಂಗಳೂರು, ಫೆ.1: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ 108 ಆ್ಯಂಬುಲೆನ್ಸ್ ಸಿಬ್ಬಂದಿ ಮುಂದಿನ 48 ಗಂಟೆಗಳೊಳಗೆ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು, ಇಲ್ಲವಾದರೆ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಗಡುವು ನೀಡಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಕರ್ತವ್ಯನಿರತ 108 ಆ್ಯಂಬುಲೆನ್ಸ್ ಸಿಬ್ಬಂದಿ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ಬಳಿಕ ಮಾತನಾಡಿದ ಅವರು, ಕರ್ತವ್ಯಕ್ಕೆ ಹಾಜರಾಗದ 152 ಮಂದಿ ಸಿಬ್ಬಂದಿಯನ್ನು ಜಿವಿಕೆ ಈಗಾಗಲೇ ವಜಾಗೊಳಿಸಿದೆ ಎಂದು ಹೇಳಿದರು. ಮುಷ್ಕರಕ್ಕೆ ಮುಂದಾಗಿರುವ ಸಿಬ್ಬಂದಿಯ ಬೇಡಿಕೆ ಸಮಂಜಸವಲ್ಲ. 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ಸಕಾಲದಲ್ಲಿ ವೇತನ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಆರೋಗ್ಯ ಸೇವೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಸುಲಿಗೆ ತಡೆಗೆ ಓಂಬುಡ್ಸ್ ಮನ್‌ಗಳ ನೇಮಕಕ್ಕೆ ಅನುಕೂಲವಾಗುವಂತೆ ಕೆಎಂಸಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲಾಗುವುದು. ಅಲ್ಲದೆ, ಮನಸೋ ಇಚ್ಛೆ ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುವುದು.
-  ಯು.ಟಿ.ಖಾದರ್, ಆರೋಗ್ಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News