×
Ad

ಸುಳ್ಯ:ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು

Update: 2016-02-03 18:25 IST

ಸುಳ್ಯ: ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಹಾಕಿದ್ದ ಮತದಾನ ಬಹಿಷ್ಕಾರದ ಬ್ಯಾನರ್‌ನ್ನು ಅಧಿಕಾರಿಗಳು ತೆರವು ಮಾಡಿದ್ದಾರೆ.

ತಮ್ಮ ಭಾಗದ ರಸ್ತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ ಚುನಾವಣೆ ಬಹಿಷ್ಕರಿಸುವುದಾಗಿ ಬ್ಯಾನರ್ ಹಾಕಲಾಗಿತ್ತು. ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಸುಳ್ಯ ಎಸ್‌ಐ ಚಂದ್ರಶೇಖರ್ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಮನವೊಲಿಸಿ ಬ್ಯಾನರ್‌ನ್ನು ತೆರವುಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News