×
Ad

ಫೆ.7ರಂದು ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

Update: 2016-02-03 23:58 IST

ಬೆಂಗಳೂರು, ಫೆ.3: ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತ ಮಕ್ಕಳ ಆಯ್ಕೆ ಶಿಬಿರವನ್ನು ಫೆ.7ರಂದು ಬೆಂಗಳೂರು ಬಾಲಭವನ ಸೊಸೈಟಿ ಆಯೋಜಿಸಿದೆ. ನಗರದ ಮಕ್ಕಳಿಗಾಗಿ ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಸೃಜನಾತ್ಮಕ ಕಲೆ ಹಾಗೂ ಸೃಜನಾತ್ಮಕ ಬರವಣಿಗೆ ಪ್ರಕಾರಗಳಲ್ಲಿ ಪ್ರಾವೀಣ್ಯತೆ ಹೊಂದಿರುವ 9 ರಿಂದ 16 ವರ್ಷದ ಮಕ್ಕಳ ಸ್ಥಳೀಯ ಮಟ್ಟದ ಆಯ್ಕೆ ವಿಭಾಗದಲ್ಲಿ ಪಾಲ್ಗೊಳ್ಳಬಹುದು. ಶಿಬಿರದಲ್ಲಿ ಆಯ್ಕೆಯಾದವರಿಗೆ ರಾಜ್ಯಮಟ್ಟದ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಹಾಗೂ ನೋಂದಣಿಗಾಗಿ ಬೆಂಗಳೂರು ಬಾಲಭವನ ಸೊಸೈಟಿಯ ಕಾರ್ಯದರ್ಶಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 22864189/22861423 ಮೂಲಕ ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News