×
Ad

ಬ್ಯಾಡ್ಮಿಂಟನ್ ರ್ಯಾಂಕಿಂಗ್: ಶ್ರೀಕಾಂತ್‌ಗೆ 9ನೆ ಸ್ಥಾನ

Update: 2016-02-04 23:37 IST

ಹೊಸದಿಲ್ಲಿ, ಫೆ.4: ಇತ್ತೀಚೆಗೆ ಸೈಯದ್ ಮೋದಿ ಗ್ರಾನ್‌ಪ್ರಿ ಗೋಲ್ಡ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ ಹೊರತಾಗಿಯೂ ಮಂಗಳವಾರ ಬಿಡುಗಡೆಯಾಗಿರುವ ಬಿಡಬ್ಲು ಎಫ್‌ನ ಪುರುಷರ ಸಿಂಗಲ್ಸ್ ರ್ಯಾಂಕಿಂಗ್‌ನಲ್ಲಿ ಭಾರತದ ಕೆ.ಶ್ರೀಕಾಂತ್ 9ನೆ ಸ್ಥಾನದಲ್ಲೇ ಉಳಿದಿದ್ದಾರೆ. ಕಶ್ಯಪ್ 15ನೆ ಸ್ಥಾನಕ್ಕೆ ಕುಸಿದಿದ್ದಾರೆ.

ಮಹಿಳೆಯರ ಸಿಂಗಲ್ಸ್ ರ್ಯಾಂಕಿಂಗ್‌ನಲ್ಲಿ ಭಾರತದ ಆಟಗಾರ್ತಿ ಪಿ.ವಿ. ಸಿಂಧು 12ನೆ ಸ್ಥಾನಕ್ಕೆ ಜಾರಿದ್ದಾರೆ. ಸೈನಾ ನೆಹ್ವಾಲ್ 2ನೆ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಸೈಯದ್ ಮೋದಿ ಟೂರ್ನಿಯಲ್ಲಿ ಪುರುಷರ ಡಬಲ್ಸ್ ಸ್ಪರ್ಧೆಯಲ್ಲಿ ರನ್ನರ್ಸ್‌-ಅಪ್ ಪ್ರಶಸ್ತಿ ಜಯಿಸಿರುವ ಭಾರತದ ಜೋಡಿ ಪ್ರಣವ್ ಜೆರ್ರಿ ಚೋಪ್ರಾ ಹಾಗೂ ಅಕ್ಷಯ್ ದೇವಾಲ್ಕರ್ 2 ಸ್ಥಾನ ಭಡ್ತಿ ಪಡೆದು 34ನೆ ಸ್ಥಾನಕ್ಕೇರಿದ್ದಾರೆ. ಕಳೆದ ವಾರ ನಡೆದ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಜ್ವಾಲಾ ಗುಟ್ಟಾ ಹಾಗೂ ಅಶ್ವಿನಿ ಪೊನ್ನಪ್ಪ 13ನೆ ಸ್ಥಾನಕ್ಕೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News