ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ: ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು: ಖಾಸಗಿ ವಲಯದಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ಬಿ.ವಿ.ಎಸ್ ವಿದ್ಯಾರ್ಥಿ ಸಂಘಟನೆಯು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯ ವೇಳೆ ಪೋಲಿಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನೆಯನ್ನು ಧಮನಿಸುವ ಮೂಲಕ ಸಂವಿಧಾನಾತ್ಮಕ ಹಕ್ಕನ್ನು ಕಸಿಯಲು ಪ್ರಯತ್ನಿಸಿದ್ದಾರೆ. ಈ ಘಟನೆಗಳಿಗೆ ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಕ್ಯಾಂಪಸ್ ಫ್ರಂಟ್ ಒತ್ತಾಯಿಸಿದೆ.
ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿ ಅಶ್ವಾಸನೆ ಕೊಟ್ಟು ವಿದ್ಯಾರ್ಥಿಗಳ ಮನವೊಲಿಸುದನ್ನು ಬಿಟ್ಟು ವಿದ್ಯಾರ್ಥಿಗಳ ಮೇಲೆ ಏಕಾಏಕಿ ಲಾಠಿ ಪ್ರಹಾರಮಾಡಿದ್ದು ಖಂಡನೀಯವಾಗಿದೆ. ಅದೇ ರೀತಿ ಮುಖ್ಯಮಂತ್ರಿಗಳೂ ಕೂಡ ವಿದ್ಯಾರ್ಥಿಗಳ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ರೀತಿ ಪ್ರತಿಭಟನಾಕಾರರಿಗೆ ರಕ್ಷಣೆಕೊಡಬೇಕಿದ್ದ ಪೊಲೀಸರು , ಭಕ್ಷಕರಾಗಿ ಖಾಕಿ ದರ್ಪವನ್ನು ವಿದ್ಯಾರ್ಥಿಗಳ ಮೇಲೆ ಮೆರೆದಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆದ ಈ ಎರಡು ಘಟನೆಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮತ್ತು ನ್ಯಾಯಯುತ ಹೋರಾಟಕಕ್ಕೆ ಸವಾಲಾಗಿದೆ. ದೇಶದಲ್ಲಿ ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸಿ ಅವರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಸರಕಾರ ಮತ್ತು ಫ್ಯಾಸಿಸ್ಟ್ ಶಕ್ತಿಗಳು ಪ್ರಯತ್ನಸುತ್ತಿದೆ ಇದರ ವಿರುದ್ಧ ಹೋರಾಟ ನಡೆಸಲು ಜ್ಯಾತ್ಯತೀತ ಶಕ್ತಿಗಳು ಒಂದಾಗಬೇಕಾಗಿದೆ ಎಂದು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಬ್ದುಲ್ ರಹೀಂ ಬೆಂಗಳೂರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.