ರೊಜಾರಿಯೊ: ವೃತ್ತಿ ಮಾರ್ಗದರ್ಶನ ಶಿಬಿರ
Update: 2016-02-05 18:58 IST
ಮಂಗಳೂರು,ಫೆ.5: ನಗರದ ರೊಜಾರಿಯೊ ಪ್ರೌಢಶಾಲೆಯ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ತಯಾರಿಸಬೇಕು ಮತ್ತು ವೃತ್ತಿ ಮಾರ್ಗದರ್ಶನ ಶಿಬಿರವನ್ನು ಇಂದು ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಪ್ರೊ.ರೊನಾಲ್ಡ್ ಪಿಂಟೊ ಆಗಮಿಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗುವ ಬಗ್ಗೆ, ಪರೀಕ್ಷೆಯನ್ನು ಎದುರಿಸುವ ಬಗ್ಗೆ, ಕಲಿತ ಪಾಠಗಳನ್ನು ನೆನಪಿನಲ್ಲಿಟ್ಟು ಕೊಳ್ಳುವ ಬಗ್ಗೆ, ಹಾಗೂ ಎಸ್.ಎಸ್.ಎಲ್.ಸಿ. ಯ ನಂತರ ಇರುವ ಕೋರ್ಸುಗಳಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡುವ ಬಗ್ಗೆ ಉಪನ್ಯಾಸವನ್ನು ನೀಡಿದರು. ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳಾನ್ನಾಡಿದರು. ವೇದಿಕೆಯಲ್ಲಿ ಶಾಲಾ ನಾಯಕ ಮೊಹಮ್ಮದ್ ಕಲಂದರ್ ಉಪಸ್ಥಿತರಿದ್ದರು. ಶಿಕ್ಷಕ ರೋಶನ್ ಲೋಬೋ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಸುಮಿತ್ ಕುಮಾರ್ ವಂದಿಸಿದರು.