×
Ad

ಪಟ್ಟೋರಿಯಲ್ಲಿ ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ

Update: 2016-02-06 12:50 IST

ಪಟ್ಟೋರಿ: ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ ಕೊಣಾಜೆ: ಶ್ರೀ ನಾಗಬ್ರಹ್ಮ ಭಜನಾ ಮಂಡಳಿ(ರಿ) ಪಟ್ಟೋರಿ, ಕೊಣಾಜೆ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮಕ್ಕೆ ಶ್ರೀ ನಾಗಬ್ರಹ್ಮ ಉಳ್ಳಾಲ್ತಿ ದೈವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ ಸೂರ್ಯೋದಯಕ್ಕೆ ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಲಾಯಿತು.

ಕೊಣಾಜೆ ಬೀಡಿನ ತಿರುಮಲೇಶ್ವರ ಭಟ್ ಹಾಗೂ ಹಿರಿಯರಾದ ರಘುರಾಮ ಕಾಜವ ಅವರು ದೀಪ ಪ್ರಜ್ವಲನೆಯ ಮೂಲಕ ಏಕಹಾ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಭಜನಾ ತಂಡಗಳ ಸದಸ್ಯರು ಆಗಮಿಸಿ ಭಜನಾ ಸಂಕೀರ್ತನೆಗಳನ್ನು ನಡೆಸಿಕೊಟ್ಟರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ನಾಗಬ್ರಹ್ಮ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರವೀಣ್ ಪಟ್ಟೋರಿ, ಕಾರ್ಯದರ್ಶಿ ದೇವದಾಸ್ ಕಲಾಯಿ ಹಾಗೂ ಭಜನಾ ಮಂಡಳಿ , ಶ್ರೀ ನಾಗಬ್ರಹ್ಮ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News