×
Ad

ಸಹಾಯಕ ಪ್ರಾಧ್ಯಾಪಕರ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ

Update: 2016-02-06 23:48 IST

ಬೆಂಗಳೂರು, ಫೆ. 6: ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಥಮ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಸಹಾಯಕ ಪ್ರಾಧ್ಯಾಪಕರ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕಗಳಂದೇ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕಗಳನ್ನು ಪರಿಷ್ಕರಿಸಿ ಪ್ರಕಟಿಸಿದೆೆ.

ಬದಲಾದ ವೇಳಾಪಟ್ಟಿಯಂತೆ ಸ್ಪರ್ಧಾತ್ಮಕ ಪರೀಕ್ಷೆಗಳು ಮಾ.2ರಿಂದ ಮಾ.6ರ ವರೆಗೆ ನಡೆಯಲಿದ್ದು, ಮಾ. 6ರ ರವಿವಾರ ಹೊರತುಪಡಿಸಿದಂತೆ, ಉಳಿದ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ಮಾತ್ರ ನಡೆಯುತ್ತಿದ್ದು, ಅಭ್ಯರ್ಥಿಗಳು ಈ ಬದಲಾವಣೆಯನ್ನು ಗಮನಿಸಿಕೊಂಡು ಅದರಂತೆ ಹಾಜರಾಗಲು ಸೂಚಿಸಿದೆ. ಪರಿಷ್ಕೃತ ವೇಳಾಪಟ್ಟಿಯ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್: http://kea.kar.nic.in ನೋಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News