ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2016-02-07 00:29 IST
ಕಾಪು: ಉದ್ಯಾವರ ರೇಷ್ಮಾ ಬಾರ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಕಟಪಾಡಿ ಮೆಸ್ಕಾಮ್ ಉದ್ಯೋಗಿ, ಕಟಪಾಡಿ ಏಣಗುಡ್ಡೆಯ ನಿವಾಸಿ ಸಂತೋಷ ಕುಮಾರ್ ಎಂದು ಗುರುತಿಸಲಾಗಿದೆ.
ಫೆ.5ರಂದು ರಾತ್ರಿ 8 ಗಂಟೆಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯು ಎದುರಿನಲ್ಲಿದ್ದ ಬೈಕ್‌ಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸಂತೋಷ್ ಕುಮಾರ್ ಫೆ.5ರಂದು ಬೆಳಗಿನ ಜಾವ 5 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.