×
Ad

ಗೂಂಡಾ ಕಾಯ್ದೆ, ಎನ್‌ಡಿಪಿಎಸ್ ಕಾಯ್ದೆ ಹಾಗೂ ಸಂತ್ರಸ್ತರ ಪರಿಹಾರ ಕುರಿತು ಕಾರ್ಯಾಗಾರ

Update: 2016-02-07 18:38 IST

ಮಂಗಳೂರು,ಫೆ.7: ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇವರ ಸಹಯೋಗದೊಂದಿಗೆ ಶನಿವಾರದಂದು ಮಂಗಳೂರಿನ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಗೂಂಡಾ ಕಾಯ್ದೆ, ಎನ್‌ಡಿಪಿಎಸ್ ಕಾಯ್ದೆ ಹಾಗೂ ಸಂತ್ರಸ್ತರ ಪರಿಹಾರಗಳ ಬಗ್ಗೆ ಅಧಿಕಾರಿಗಳಿಗೆ ಕಾರ್ಯಾಗಾರವನ್ನು ನಡೆಸಲಾಯಿತು. ಸಭೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವ ಸಂಧರ್ಭದಲ್ಲಿ  ಅನುಸರಿಸಬೇಕಾದ ಕ್ರಮಗಳ ಬಗ್ಗೆ, ವೈಜ್ಞಾನಿಕವಾಗಿ ತನಿಖೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವ ಬಗ್ಗೆ ಪಾಲಿಸಬೇಕಾದ ನಿಯಮಗಳ ಕುರಿತು ಮಾಹಿತಿಯನ್ನು ನೀಡಲಾುತು.

ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಹಾಗೂ ಅನುಸರಿಸಬೇಕಾದ ನಿಯಮಗಳ ಬಗ್ಗೆ ಕೂಡ ಕಾರ್ಯಾಗಾರದಲ್ಲಿ ಅಧಿಕಾರಿ/ಸಿಬ್ಬಂಧಿಗಳಿಗೆ ಮಾಹಿತಿ ನೀಡಲಾಯಿತು. ಕಾರ್ಯಾಗಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಉಮಾ ಎಂ.ಜಿ, ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ , ದ.ಕ ಜಿಲ್ಲಾ ಎಸ್ ಪಿ ಡಾ.ಶರಣಪ್ಪ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಡಿ, ಗಣೇಶ್.ಬಿ, ಬೆಂಗಳೂರಿನ ಸರಕಾರಿ ವಕೀಲರು ಇಂದ್ರೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News