ಪಿ.ಎ.ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕೊಣಾಜೆ, ಫೆ.7: ವಿಶ್ವಮಂಗಳ ಪ್ರೌಢ ಶಾಲೆಯ ಹತ್ತನೆ ತರಗತಿಯ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವು ನಡುಪದವಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಅಬ್ದುಲ್ ಶರೀಫ್ ಕಾರ್ಯಾಗಾರ ಉದ್ಘಾಟಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜು ಶೈಕ್ಷಣಿಕ ವಿಭಾಗದ ನಿರ್ದೇಶಕ ಪ್ರೊ. ಸರ್ಫ್ರಾಝ್ ಹಾಶಿಮ್, ‘ವಿದ್ಯಾರ್ಥಿಗಳು ಅಧ್ಯಯನದಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಮತ್ತು ತಮಗೆ ಬೇಕಾದ ವೃತ್ತಿಯನ್ನು ಹೇಗೆ ಆರಿಸಿಕೊಳ್ಳಬಹುದು?’ ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಇಂಜಿನಿಯರಿಂಗ್ ವಿಭಾಗಗಳಿಗೆ ದಾಖಲಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಫ್ನಾಝ್ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಪ್ರೊ. ಎ.ಜೆ. ಆ್ಯಂಟನಿ ಮಾತನಾಡಿದರು.
ಪ್ರೊ.ಎಸ್. ಎ. ಅಬ್ದುಲ್ಲ ಕುಂಞಿ, ಶರಫುದ್ದೀನ್, ಗಣಕಯಂತ್ರ ವಿಭಾಗದ ಮುಖ್ಯಸ್ಥೆ, ಪ್ರೊ. ಶರ್ಮಿಳಾ ಕುಮಾರಿ ಉಪಸ್ಥಿತರಿದ್ದರು. ರಾಸಾಯನ ಶಾಸ್ತ್ರ ವಿಭಾಗದ ಪ್ರೊ. ನಬೀಲ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವಮಂಗಳ ಪ್ರೌಢಶಾಲೆಯ ಸಹಶಿಕ್ಷಕಿ ವನಿತಾ ವಂದಿಸಿದರು.