×
Ad

ಕಾರು ಢಿಕ್ಕಿ: ಸೈಕಲ್ ಸವಾರ ಸಾವು

Update: 2016-02-07 23:49 IST

ಮಂಡ್ಯ, ಫೆ.7: ಹಿಂದಿನಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ತಾಲೂಕಿನ ಚಿಂದಗಿರಿದೊಡ್ಡಿ ಗ್ರಾಮದ ಚಿಕ್ಕಹಳ್ಳಿಗೌಡ ಅಲಿಯಾಸ್ ಅಣ್ಣಯ್ಯ(50) ಎಂದು ಗುರುತಿಸಲಾಗಿದೆ.
ಮದ್ದೂರು ಕಡೆಯಿಂದ ಮಂಡ್ಯ ಕಡೆಗೆ ಸೈಕಲ್‌ನಲ್ಲಿ ಬರುತ್ತಿದ್ದಾಗ ಅತೀ ವೇಗವಾಗಿ ಹಿಂದಿನಿಂದ ಬಂದ ಕಾರೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಅಣ್ಣಯ್ಯ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News