×
Ad

ಶಿಡ್ಲಘಟ್ಟ: ಜೆಡಿಎಸ್ ಅಭ್ಯರ್ಥಿ ಪ್ರಚಾರ

Update: 2016-02-08 22:52 IST

ಶಿಡ್ಲಘಟ್ಟ, ಫೆ.8: ಕಳೆದ ಮೂರು ವರ್ಷಗಳಲ್ಲಿ ತಾಲೂಕಿನಲ್ಲಿ ಶಾಸಕರ ಜನಪರವಾದ ಕಾರ್ಯಕ್ರ ಮಗಳೇ ನಮ್ಮ ಗೆಲುವಿಗೆ ಸಹಕಾರಿ ಯಾಗಲಿವೆ ಎಂದು ಜಂಗಮಕೋಟೆ ಜಿಪಂ ಜೆಡಿಎಸ್ ಅಭ್ಯರ್ಥಿ ನಳಿನಾ ಮಂಜುನಾಥ್ ಅಭಿಪ್ರಾಯ ಪಟ್ಟರರು.

ತಾಲೂಕಿನ ಜಂಗಮಕೋಟೆ ಹೋಬಳಿ ಸುಗಟೂರು ಗ್ರಾಮದಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.ಳೆದ ಅನೇಕ ವರ್ಷಗಳಿಂದ ಈ ಭಾಗದಲ್ಲಿ ಆಯ್ಕೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸಾಧನೆ ಶೂನ್ಯವಾಗಿದ್ದು, ಕುಡಿಯುವ ನೀರು, ರಸ್ತೆ, ಚರಂಡಿಗಳು, ಸೇರಿದಂತೆ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಿಲ್ಲ. ಸದಸ್ಯರಾದ ನಂತರ ಈ ಕ್ಷೇತ್ರಕ್ಕೆ ಸೌಜನ್ಯಕ್ಕಾದರೂ ಭೇಟಿ ನೀಡದೆ ಈ ಭಾಗದಲ್ಲಿನ ಜನರನ್ನು ನಿರ್ಲಕ್ಷ್ಯ ವಹಿಸಿದ್ದಾರೆ, ಈ ಬಾರಿ ಜನರು ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡಿದರೆ, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.ಂಗಮಕೋಟೆ ತಾಪಂ ಕ್ಷೇತ್ರದ ಅಭ್ಯರ್ಥಿ ಜೆ.ಎಂ.ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಹಮ್ಮಿಕೊಂಡಿದ್ದ ಜನಪರವಾದ ಕಾರ್ಯಕ್ರಮಗಳ ಹಾದಿಯಲ್ಲಿ ಶಾಸಕ ರಾಜಣ್ಣ ಕೆಲಸ ಮಾಡುತ್ತಿದ್ದು, ಕಳೆದ ಬಾರಿ ತಾಪಂ ನಲ್ಲಿದ್ದ ಕಾಂಗ್ರೆಸ್‌ನ ಜನಪ್ರತಿನಿಧಿಗಳು ಈ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅಭಿವೃದ್ಧಿಯಿಂದ ವಂಚನೆ ಮಾಡಿದ್ದಾರೆ ಎಂದು ದೂರಿದರು.
ಮಾಜಿ ಗ್ರಾಪಂ ಅಧ್ಯಕ್ಷ ನಜೀರ್‌ಸಾಬ್, ಜೆ.ವೆಂಕಟಾಪುರ ಗ್ರಾಪಂ ಉಪಾಧ್ಯಕ್ಷ ಚಂದ್ರೇಗೌಡ, ಶ್ರೀನಿವಾಸ್, ಮಂಜುನಾಥ್ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News