ಜಿಲ್ಲಾಮಟ್ಟದ ಚುನಾವಣಾ ಪ್ರಚಾರ ನಿಯಂತ್ರಣ ಸಮಿತಿ
Update: 2016-02-08 23:21 IST
ಬೆಂಗಳೂರು, ಫೆ. 8: ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಚುನಾವಣಾ ಪ್ರಚಾರ ಸಾಮಗ್ರಿಗಳ ಪರಿಶೀಲನೆಗೆ ಚುನಾವಣಾ ಆಯೋಗ ರಚಿಸಿರುವ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿಯ ಅನುಮತಿ ಪಡೆಯಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕೈಗೊಳ್ಳುವಾಗ ಪತ್ರಿಕೆ, ಶ್ರವಣ, ದೃಶ್ಯ ಮಾಧ್ಯಮ ಪ್ರಚಾರ ಸಾಮಗ್ರಿಗಳ ಬಗ್ಗೆ ವಿವರಗಳನ್ನು ಜಿಲ್ಲಾಮಟ್ಟದ ಪರಿಶೀಲನಾ ಸಮಿತಿಗೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಪರಿಶೀಲನೆಗಾಗಿ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿಗೆ ಸಲ್ಲಿಸಬೇಕೆಂದು ಅವರು ಹೇಳಿದ್ದಾರೆ.