ಕಾವಡಿ: ಬಾವಿಗೆ ಬಿದ್ದು ಮೃತ್ಯು
Update: 2016-02-08 23:54 IST
ಕೋಟ, ಫೆ.8: ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಕಾವಡಿ ಗ್ರಾಮದ ನಾಗರಾಜ(55) ಎಂಬವರ ಮೃತದೇಹ ಸೋಮವಾರ ಮಧ್ಯಾಹ್ನ ವೇಳೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ಫೆ.6ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಹೋದವರು ನಾಪತ್ತೆಯಾಗಿದ್ದರು. ಇವರು ಕೆಲಸ ಬಿಟ್ಟು ಮನೆಗೆ ಬರುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.