×
Ad

ಹುಬ್ಬಳ್ಳಿ ಕಟ್ಟಡ ಕುಸಿತ; ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

Update: 2016-02-09 10:44 IST

ಹುಬ್ಬಳ್ಳಿ, ಫೆ.9: ನಗರದ ಕೇಂದ್ರ ರೇಲ್ವೆ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದ  ಸುಮಾರು 50 ವರ್ಷ ಹಳೆಯದಾದ ಎರಡು ಅಂತಸ್ತಿನ ಕಟ್ಟಡ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಅವಶೇಷಗಳಡಿಯಲ್ಲಿ ತಡರಾತ್ರಿ ಪೇದೆ ಎಸ್ ಎಸ್ ದೀಕ್ಷಿತ್ ಮೃತದೇಹ ಪತ್ತೆಯಾಗಿದೆ. ಇನ್ನೂ  ಇಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲಿ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ರಕ್ಷಣಾ ಕಾರ್ಯಾಚರಣೆ  ಮುಂದುವರಿದಿದ್ದು,  ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ರೇಲ್ವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News