ಕುಮಾರಸ್ವಾಮಿ ಮಹಾನ್ ಸುಳ್ಳುಗಾರ: ಸಿದ್ದರಾಮಯ್ಯ
Update: 2016-02-09 23:15 IST
ಹುಬ್ಬಳ್ಳಿ, ಫೆ.9: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಧರಿಸುವ ಕೈಗಡಿಯಾರ, ಕನ್ನಡಕಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮಾಡಿರುವ ಆರೋಪಗಳೆಲ್ಲ ಆಧಾರರಹಿತವಾದದ್ದು ಎಂದರು.
ಸುಳ್ಳು ಆಪಾದನೆಗಳನ್ನು ಮಾಡುವ ಕುಮಾರಸ್ವಾಮಿಯ ಮಾತನ್ನು ಯಾರೂ ಕೂಡ ನಂಬುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.