ಹುಬ್ಬಳ್ಳಿ ರೈಲ್ವೆ ಪಾರ್ಸಲ್ ಕಟ್ಟಡ ಕುಸಿತ; ಸಂತ್ರಸ್ತ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಪರಿಹಾರ
Update: 2016-02-09 23:20 IST
ಹುಬ್ಬಳ್ಳಿ, ಫೆ.9: ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಪಾರ್ಸಲ್ ಕಟ್ಟಡ ಕುಸಿತದಲ್ಲಿ ಮೃತಪಟ್ಟಿರುವ ಏಳು ಮಂದಿ ಸಂತ್ರಸ್ತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರವನ್ನು ರಾಜ್ಯ ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ನಂತರ ರೈಲ್ವೆ ಆಸ್ಪತ್ರೆಗೂ ತೆರಳಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ಅಲ್ಲದೆ, ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದರು.