ಫೆ.11ರಿಂದ ರಜತ ನಡೆಯಲ್ಲೊಂದು ಛಾಯಕಿರಣ
Update: 2016-02-11 14:02 IST
ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಬಂಟ್ವಾಳ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತ ವರ್ಷಾಚರಣೆ ಸಮಿತಿ ಆಶ್ರಯದಲ್ಲಿ "ರಜತ ನಡೆಯಲ್ಲೊಂದು ಛಾಯಕಿರಣ" ಫೆ11ರಿಂದ ಪ್ರೆಸ್ ಕ್ಲಬ್ ಬಿಸಿರೋಡ್ ನಲ್ಲಿ ನಡೆಯುತ್ತಿದೆ.
ಕಾರ್ಯಕ್ರಮವನ್ನು ಉದಯವಾಣಿ ಬ್ಯೂರೋ ಮುಖ್ಯಸ್ಥ ಮನೋಹರ್ ಪ್ರಸಾದ್ ಉದ್ಘಾಟಿಸುವರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಅಧ್ಯಕ್ಷತೆಯಲ್ಲಿ ನಡೆಯುವುದು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ., ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿರುವರು. ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ ರಿಗೆ ಅಭಿನಂದನೆ ನಡೆಯಲಿದೆ.
ಫೆ. 13ರಂದು ಬೆಳಗ್ಗೆ 10 ಗಂಟೆಗೆ ಫೊಟೋಗ್ರಫಿ ಕುರಿತು ಆಸಕ್ತ ವಿದ್ಯಾರ್ಥಿಗಳಿಗೆ ಕಾರ್ಯಗಾರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.