×
Ad

ಸಿಎಫ್‌ಐ ನಾಯಕರ ಬಂಧನ ವಿರೋಧಿಸಿ ಪ್ರತಿಭಟನೆ

Update: 2016-02-11 18:32 IST

ಮಂಗಳೂರು,ಫೆ.11: ಬೆಂಗಳೂರಿನಲ್ಲಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ವಿಳಂಬ ಕ್ರಮವನ್ನು ವಿರೋಧಿಸಿ ಪ್ರತಿಭಟನಾ ನಿರತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್‌ಐ)ದ ರಾಜ್ಯ ನಾಯಕರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಇಂದು ದ.ಕ ಜಿಲ್ಲಾ ಧಿಕಾರಿ ಕಚೇರಿ ಮುಂಭಾಗದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮಂಗಳೂರು ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

  

ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಮುಹಮ್ಮದ್ ಇರ್ಷಾದ್ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ ಮಾಡುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನಾಯಕರ ಸಹಿತ ಮುನ್ನೂರು ವಿದ್ಯಾರ್ಥಿಗಳ ಮೇಲೆ ಐದಕ್ಕಿಂತಲೂ ಹೆಚ್ಚು ಪ್ರಕರಣವನ್ನು ದಾಖಲಿಸಿರುವುದು ವಿದ್ಯಾರ್ಥಿಶಕ್ತಿಯನ್ನು ದಮನಿಸಲು ಸೃಷ್ಟಿಸಿದ ಹುನ್ನಾರ ಎಂದು ಆರೋಪಿಸಿದರು. ಸಂವಿಧಾನಬದ್ದ ಪ್ರತಿಭಟನೆಯನ್ನು ದೇಶಾದಾದ್ಯಂತ ದಮನಿಸುವ ಯತ್ನಗಳು ನಡೆಯುತ್ತಿದ್ದು ಕೇಂದ್ರ ಸರಕಾರ, ರಾಜ್ಯ ಸರಕಾರ ,ಪೋಲಿಸ್ ಇಲಾಖೆ ಪ್ರತಿಭಟನಕಾರರ ಮೇಲೆ ದೌರ್ಜನ್ಯವೆಸಗುತ್ತಿದೆ ಎಂದು ಅವರು ಹೇಳಿದರು.

 ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಹಮೀದ್ ಮಂಗಳೂರು ತಾಲೂಕು ಅಧ್ಯಕ್ಷ ನಿಝಾಮುದ್ದೀನ್, ಜಿಲ್ಲಾ ಸಮಿತಿ ಸದಸ್ಯರುಗಳಾದ ಕಿಯಾಜ್, ಮುಕ್ಷಿತ್, ಸಫೀಲ್ ಮೊದಲಾದವರು ಪಾಲ್ಗೊಮಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News