ಮೂಡುಬಿದಿರೆ:ವೀರ ಯೋಧ ಹನುಮಂತಪ್ಪ ಕೊಪ್ಪದ ಹಾಗೂ ಇತರ ಯೋಧರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಂತಾಪ
Update: 2016-02-12 18:37 IST
ಮೂಡುಬಿದಿರೆ: ಜಗತ್ತಿನ ಅತ್ಯಂತ ಎತ್ತರದ ಮತ್ತು ಅತ್ಯಂತ ಅಪಾಯಕಾರಿ ಯುದ್ಧಭೂಮಿ ಸಿಯಾಚಿನ್ ಹಿಮಪಾತಕ್ಕೆ ಒಳಗಾಗಿ 6 ದಿನ 30 ಅಡಿ ಆಳದಲ್ಲಿ ಹಿಮರಾಶಿಯ ಅಡಿಯಲ್ಲಿ ಜೀವನ್ಮರಣದ ಹೋರಾಟ ನಡೆಸಿ, ಹುತಾತ್ಮರಾದ ವೀರ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ ಹಾಗೂ ಇತರ ಯೋಧರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸಿನ ವತಿಯಿಂದ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಮತ್ತಿತರ ಪದಾಧಿಕಾರಿಗಳು ಹಾಗೂ ರಾಜ್ಯ ಯುವಜನ ಸೇವೆ ಮತ್ತು ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.