×
Ad

ಮಂಗಳೂರು : ಎಂಡೋಸಲ್ಫಾನ್ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Update: 2016-02-12 20:35 IST

 ಮಂಗಳೂರು ಫೆಬ್ರವರಿ 12 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‌ಗಳ ಸಹಯೋಗದೊಂದಿಗೆ ಫೆ.16 ರಂದು ಬೆಳ್ತಂಗಡಿ ತಾಲೂಕಿ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ, ಸುಳ್ಯ ತಾಲೂಕಿನ ಬೆಳ್ಳಾರೆ, ಮಂಗಳ ೂರು ತಾಲೂಕಿನ ಶಿರ್ತಾಡಿ ಹಾಗೂ ಫೆ. 17ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಬಂಟ್ವಾಳ ತಾಲೂಕಿನ ವಿಟ್ಲ ಮತ್ತು ಫೆ. 20 ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ವುತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News