ಫೆ.19ರಂದು ಅಕ್ಷರ ದಾಸೋಹ ನೌಕರರ ವಿಧಾನಸೌಧ ಚಲೋ
ಇಸ್ಕಾನ್‌ನ ಊಟವನ್ನು ಈ ಕೂಡಲೇ ನಿಲ್ಲಿಸಬೇಕು
ಬೆಂಗಳೂರು, ಫೆ. 12: ಅಕ್ಷರ ದಾಸೋಹ ನೌಕರರ ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ೆ.19ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ತಿಳಿಸಿದೆ.
ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಮಾತನಾಡಿ, ಅಕ್ಷರ ದಾಸೋಹ ನೌಕರರ ವೇತನ ಹೆಚ್ಚಿಸುವಂತೆ ಎರಡು ಮೂರು ವರ್ಷಗಳಿಂದ ಒತ್ತಾಯಿಸಿ ಹೋರಾಟ ಮಾಡಿದರೂ ಸರಕಾರ ಸ್ಪಂದಿಸಿಲ್ಲ. ಹಾಗಾಗಿ ಈಗ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಬಿಸಿಯೂಟ ಯೋಜನೆಗೆ ಕಳೆದ ಬಜೆಟ್‌ನಲ್ಲಿ ಕಡಿತ ಮಾಡಿದ್ದ ಹಣವನ್ನು ವಾಪಸ್ ಕೊಡಬೇಕು, ಅಂಗನವಾಡಿಗಳನ್ನು ಸಬಲಗೊಳಿಸಲು ಹೆಚ್ಚು ಅನುದಾನ ನೀಡಬೇಕು, ಬಿಸಿಯೂಟ ತಯಾರಿಸುವವರು ಮತ್ತು ಸಹಾಯಕರಿಗೆ ಕನಿಷ್ಠ ಕೂಲಿ ಮತ್ತು ಸಾಮಾಜಿಕ ಭದ್ರತೆ ನೀಡಬೇಕು. ಬಿಸಿಯೂಟ ಯೋಜನೆಯನ್ನು 12ನೆ ತರಗತಿವರೆಗೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಅಕ್ಷರ ದಾಸೋಹ ನೌಕರರ ಹಿತದೃಷ್ಟಿ ಯಿಂದ ಮಧ್ಯಾಹ್ನ ಬಿಸಿಯೂಟ ಪೂರೈಸು ತ್ತಿರುವ ಇಸ್ಕಾನ್‌ಊಟವನ್ನು ಕೂಡಲೇ ನಿಲ್ಲಿಸಬೇಕು. ಈ ಸಿಬ್ಬಂದಿಯನ್ನು ಸ್ವಾಸ್ಥ ಬಿಮಾ ಯೋಜನೆಯಡಿ ತರಬೇಕು. ವೇತನವನ್ನು 18 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸು ವಂತೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಾಲಿನಿಮೇಸ್ತ, ಉಪಾಧ್ಯಕ್ಷ ಟಿ.ಲೀಲಾವತಿ ಉಪಸ್ಥಿತರಿದ್ದರು.