×
Ad

ಫೆ.16ಕ್ಕೆ ರೋಹಿತ್ ವೇಮುಲಾಗೆ ನುಡಿನಮನ, ವಿಚಾರ ಸಂಕಿರಣ

Update: 2016-02-12 23:27 IST

ಬೆಂಗಳೂರು, ಫೆ.12: ಹೈದರಾಬಾದ್ ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರಿಗೆ ನುಡಿನಮನ ಮತ್ತು ವಿವಿಗಳ ನೆರಳಿನಲ್ಲಿ ಜಾತಿವಾದ ಮತ್ತ ಸರಕಾರಗಳು ವಿಷಯ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ೆ.16ರಂದು ಸೆಂಟ್ರಲ್ ಕಾಲೇಜಿನ ಸೆನೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ತಿಳಿಸಿದೆ.
ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಕಾರ್ಯಾಧ್ಯಕ್ಷ ಆರ್.ಮೋಹನ್‌ರಾಜ್, ನುಡಿ ನಮನ ಮತ್ತು ವಿಶ್ವವಿದ್ಯಾನಿಲಯಗಳ ನೆರಳಿನಲ್ಲಿ ಜಾತಿವಾದ ಮತ್ತು ಸರಕಾರಗಳು ಎಂಬ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ್, ವೇಮುಲಾನ ಸಹಪಾಠಿ ಉಮಾ ಮಹೇಶ್ವರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಬಸವರಾಜ್ ಕೌತಾಳ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News