ನಾಳೆ ಶಿವಯೋಗಿ ಭವನ ಉದ್ಘಾಟನೆ
Update: 2016-02-12 23:56 IST
ಬೆಂಗಳೂರು, ಫೆ. 12: ಕೆಂಗೇರಿ ಉಪನಗರ ಬಂಡೇಮಠದ ಶ್ರೀ ಕ್ಷೇತ್ರ ಏಕದಳ ಬಿಲ್ವ ಬಂಡೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಿರಕ್ತಾಶ್ರಮ ಮತ್ತು ಚರ ಪಟ್ಟಾಭಿಷೇಕ ಮಹೋತ್ಸವ ಹಾಗೂ ಬಂಡೇಶ್ವರ ಶಿವಯೋಗಿಗಳ ಭವನ ಉದ್ಘಾಟನಾ ಸಮಾರಂಭವನ್ನು ೆ.14ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ವ್ಯವಸ್ಥಾಪಕ ಸಮಿತಿಯ ಮ್ಯಾನೇಜರ್ ಎನ್. ನಾಗರಾಜ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ, ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯ ಸಚಿವರಾದ ಡಾ. ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.