ಕಬಕ: ನೇಣು ಬಿಗಿದು ಆತ್ಮಹತ್ಯೆ

Update: 2016-02-13 18:41 GMT

ಪುತ್ತೂರು, ಫೆ.13: ಪುತ್ತೂರಿನ ಕಬಕದ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಶಿವಾಜಿನಗರ ನಿವಾಸಿ ದಯಾನಂದ ಹೆಗ್ಡೆ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಒಂದುವರೆ ತಿಂಗಳಿನಿಂದ ದಯಾನಂದರು ಪತ್ನಿ ಮಕ್ಕಳನ್ನು ತ್ಯಜಿಸಿ ಕಬಕದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಮೃತರಿಗೆ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News