ಚುನಾವಣಾ ಪ್ರಚಾರಕ್ಕೆ ಹಿರಿಯ ಮುಖಂಡರು: ಐವನ್ ಡಿಸೋಜ

Update: 2016-02-13 18:42 GMT

ಮಂಗಳೂರು, ೆ. 13: ದಕ್ಷಿಣ ಕನ್ನಡ ಜಿಪಂ ಮತ್ತು ತಾಪಂ ಚುನಾವಣೆಗೆ ಸಂಬಂಧಿಸಿ ೆ.15,16 ಹಾಗೂ 17ರಂದು ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಸಂಸದ ವೀರಪ್ಪ ಮೊಯ್ಲಿ, ರಾಜ್ಯ ಸಭಾ ಸದಸ್ಯ ಆಸ್ಕರ್ ೆರ್ನಾಂಡಿಸ್, ಮಾಜಿ ಸಭಾಪತಿ ಬಿ.ಆರ್. ಸುದರ್ಶನ್, ಸಚಿವರಾದ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಫೆ.15ರಂದು ಪ್ರಣಾಳಿಕೆ ಬಿಡುಗಡೆ: ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ‘ನಮ್ಮ ಸಾಧನೆ- ಆದ್ಯತೆ ಮತ್ತು ನಮ್ಮ ಸಂಕಲ್ಪ’ ಕುರಿತ ಪ್ರಣಾಳಿಕೆಯನ್ನು ೆ.15ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಬಿಡುಗಡೆ ಮಾಡಲಿದ್ದಾರೆ.

ಸಂಸದರ ಹೇಳಿಕೆಗೆ ಅಸಮಾಧಾನ: ಸಂಸದರು ಜಿಲ್ಲೆಯ ಶಾಸಕರು ಹಾಗೂ ಮಂತ್ರಿಗಳ ಬಗ್ಗೆ ಬಹಳ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಹೇಳಿಕೆ ನೀಡುವ ಮುನ್ನ ತಾವೇನು ಮಾಡಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು. ಕಾಂಗ್ರೆಸ್ ಪ್ರತಿನಿಧಿಗಳು ಜನರಿಗೆ ನೀಡಿರುವಷ್ಟು ಸ್ಪಂದನೆ ಯಾರೂ ನೀಡಿಲ್ಲ. ಬಿಜೆಪಿಯ ಮಂತ್ರಿಗಳು ಭ್ರಷ್ಟಾಚಾರ ಮಾಡಿ ಜೈಲು ಸೇರಿದ್ದರು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಭ್ರಷ್ಟಾಚಾರ ನಡೆಸಿಲ್ಲ ಎಂದರು. ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಸುರೇಶ್ ಬಲ್ಲಾಳ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News