ಜೆಎನ್‌ಯು ಘಟನೆ: ನ್ಯಾಯಾಂಗ ತನಿಖೆಗೆ ಆದೇಶ

Update: 2016-02-14 03:40 GMT

ನವದೆಹಲಿ, ಫೆ.14: ಇಲ್ಲಿನ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಕೆಲ ವಿದ್ಯಾರ್ಥಿಗಳು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯಾ ಕುಮಾರ್ ಅವರನ್ನು ಅಮಾನತು ಮಾಡಿದ ಬಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
 ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ, ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜಾ, ಜೆಡಿಯು ಸಂಸದರ ಕೆ.ಸಿ.ತ್ಯಾಗಿ ಹಾಗೂ ಇತರ ಮುಖಂಡರನ್ನೊಳಗೊಂಡ ನಿಯೋಗ ಕೇಜ್ರಿವಾಲ್ ಅವರನ್ನು ಬೇಟಿ ಮಾಡಿ ಚರ್ಚೆ ನಡೆಸಿದ ಬಳಿಕ, ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶಿಸಿದರು. ಕುಮಾರ್ ವಿರುದ್ಧದ ಅಮಾನತು ಆದೇಶಕ್ಕೆ ಒದಗಿಸಿದ ಪುರಾವೆಯ ಕ್ರಮಬದ್ಧತೆಯನ್ನು ಈ ಆಯೋಗ ತನಿಖೆ ನಡೆಸಲಿದೆ. ಅಪ್ಜಲ್‌ಗುರು ಮರಣ ದಂಡನೆಯನ್ನು ವಿರೋಧಿಸಿ ಸಮಾರಂ ಹಮ್ಮಿಕೊಂಡ ಹಿನ್ನೆಲೆಯಲ್ಲಿ, ದೇಶದ್ರೋಹದ ಆರೋಪದ ಮೇಲೆ ಕುಮಾರ್‌ನನ್ನು ಅಮಾನತು ಮಾಡಲಾಗಿತ್ತು.
ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಮಾರ್ ಬಂಧನವನ್ನು ವಿರೋಧ ಪಕ್ಷಗಳು ಕಟುವಾಗಿ ಟೀಕಿಸಿದ್ದವರು. ಜೆಎನ್‌ಯು ವಿದ್ಯಾರ್ಥಿ ಮುಖಂಡ ಬಾರತ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪವಿದ್ದು, ಇದಕ್ಕೆ ಪ್ರತಿಯಾಗಿ ಎಬಿವಿಪಿ ವಿದ್ಯಾರ್ಥಿಗಳ ಮೇಲೂ ಇದೇ ಆರೋಪವಿದೆ. ಸತ್ಯವನ್ನು ಶೋಧಿಸಲು ದಿಲ್ಲಿ ಸರಕಾರ ಜಿಲ್ಲಾ ನ್ಯಾಯಾಧೀಶರ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ಕೇಜ್ರಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರನ್ನೂ ಯೋತ್ಪಾದಕರನ್ನಾಗಿ ಮಾಡಲು ದಿಲ್ಲಿ ಪೊಲೀಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಜ್ರಿವಾಲ್ ಇದಕ್ಕೂ ಮುನ್ನ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News