ಈ "ದೇಶದ್ರೋಹಿ" ವಿದ್ಯಾರ್ಥಿ ನಿಜಕ್ಕೂ ತನ್ನ ಭಾಷಣದಲ್ಲಿ ಹೇಳಿದ್ದೇನು?

Update: 2016-02-14 04:34 GMT


ದೇಶದ್ರೋಹದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಹಿಂದಿರುವ ರಾಜಕೀಯ ವಿಷ ವರ್ತುಲಗಳ ಕುರಿತಂತೆ ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿದೆ. ಜೆಎನ್‌ಯುನಲ್ಲಿ ವಿದ್ಯಾರ್ಥಿ ಮುಖಂಡ ನಿಜಕ್ಕೂ ಮಾತನಾಡಿರುವುದು ಏನು? ಅವರ ಭಾಷಣದಲ್ಲಿ ದೇಶದ್ರೋಹಿ ಚಿಂತನೆಗಳಿದ್ದವೆ? ಎನ್ನುವ ಅಂಶವನ್ನು, ವಿದ್ಯಾರ್ಥಿ ಕನ್ಹಯ್ಯಾ ಮಾಡಿರುವ ಭಾಷಣದ ವೀಡಿಯೊ ಬಯಲು ಮಾಡಿದೆ. ಆ ಭಾಷಣವನ್ನು ಇಲ್ಲಿ ಅಕ್ಷರ ರೂಪಕ್ಕಿಳಿಸಲಾಗಿದೆ. ಜೆಎನ್‌ಯುನ ಈ ವಿದ್ಯಾರ್ಥಿಯನ್ನು ಬಂಧಿಸಿರುವುದಕ್ಕೆ ನಿಜವಾದ ಕಾರಣ ಏನು ಎನ್ನುವುದನ್ನು ಈ ಬರಹ ತೆರೆದಿಡುತ್ತದೆ. 


ಬ್ರಿಟಿಷರಿಂದ ಕ್ಷಮೆ ಕೇಳಿದ್ದ ಸಾವರ್ಕರನ ಚೇಲಾಗಳಿವರು. ಹರ್ಯಾಣದಲ್ಲಿರುವ ಖಟ್ಟರ್ ಸರಕಾರ, ಶಹೀದ್ ಭಗತ್ ಸಿಂಗ್‌ರ ಹೆಸರಲ್ಲಿದ್ದ ವಿಮಾನ ನಿಲ್ದಾಣಕ್ಕೆ ಸಂಘಿಯ ಹೆಸರನ್ನಿಟ್ಟುಬಿಟ್ಟರು. ನಾನು ಹೇಳುತ್ತಿರುವುದೇನೆಂದರೆ ನಮಗೆ ದೇಶಭಕ್ತಿಯ ಸರ್ಟಿಫಿಕೇಟ್ ಆರೆಸ್ಸೆಸ್‌ನಿಂದ ಬೇಕಾಗಿಲ್ಲ. ನಮಗೆ ನ್ಯಾಶನಲಿಷ್ಟ್ ಎಂಬ ಸರ್ಟಿಫಿಕೇಟ್ ಆರೆಸ್ಸೆಸ್‌ನಿಂದ ಬೇಕಾಗಿಲ್ಲ. ನಾವು ಈ ದೇಶದವರು, ಇದರ ಮಣ್ಣಿನ ಬಗ್ಗೆ ನಮಗೆ ಪ್ರೀತಿಯಿದೆ, ಈ ದೇಶದ ಒಳಗಿರುವ ಶೇ.80 ಬಡವರ ಪರವಾಗಿ ನಾವು ಹೋರಾಡುತ್ತೇವೆ. ನಮಗೆ ಇದೇ ದೇಶಪ್ರೇಮ. ನಮಗೆ ಸಂಪೂರ್ಣ ನಂಬಿಕೆಯಿದೆ ಬಾಬಾ ಸಾಹೇಬರ ಬಗ್ಗೆ, ನಮಗೆ ಸಂಪೂರ್ಣ ನಂಬಿಕೆಯಿದೆ ದೇಶದ ಸಂವಿಧಾನದ ಮೇಲೆ, ಬಹಳ ಸ್ಪಷ್ಟವಾಗಿ ಹೇಳುತ್ತೇನೆ ಈ ದೇಶದ ಸಂವಿಧಾನದ ಮೇಲೆ ಯಾರಾದರೂ ಬೆರಳು ತೋರಿಸಿದರೆ, ಆ ಬೆರಳು ಸಂಘಿಯದ್ದಾಗಲಿ ಆ ಬೆರಳು ಇನ್ಯಾರದೇ ಆಗಲಿ ನಾವದನ್ನು ಸಹಿಸುವುದಿಲ್ಲ. ನಾವು ಸಂವಿಧಾನವನ್ನು ನಂಬುತ್ತೇವೆ, ಆದರೆ ನಾಗಪುರದಲ್ಲಿ ಹೇಳಿಕೊಡಲಾಗುವ ಸಂವಿಧಾನದ ಮೇಲೆ ನಮಗೆ ಭರವಸೆಯಿಲ್ಲ. ನಮಗೆ ಮನುಸ್ಮತಿಯ ಬಗ್ಗೆ ಯಾವುದೇ ಭರವಸೆಯಿಲ್ಲ. ನಮಗೆ ಈ ದೇಶದ ಒಳಗಿರುವ ಜಾತಿವಾದದ ಮೇಲೆ ಯಾವುದೇ ಭರವಸೆಯಿಲ್ಲ. ಇದೇ ಸಂವಿಧಾನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರರು ಗಲ್ಲು ಶಿಕ್ಷೆಯನ್ನು ರದ್ದು ಮಾಡುವ ಬಗ್ಗೆ ಹೇಳುತ್ತಾರೆ, ಇದೇ ಬಾಬಾ ಸಾಹೇಬ್ ಅಂಬೇಡ್ಕರರು ಅಭಿವ್ಯಕ್ತಿ ಸ್ವಾತಂತ್ರದ ಬಗ್ಗೆ ಹೇಳುತ್ತಾರೆ. ನಾವು ಸಂವಿಧಾನವನ್ನು ಎತ್ತಿ ಹಿಡಿಯುತ್ತಾ ನಮ್ಮ ಮೂಲಭೂತ ಹಕ್ಕನ್ನು ಸಾಂವಿಧಾನಿಕ ಹಕ್ಕನ್ನು ಎತ್ತಿ ಹಿಡಿಯಲು ಬಯಸುತ್ತೇವೆ. ಆದರಿದು ನಾಚಿಕೆಗೇಡಿನ ವಿಷಯ. ದುಃಖದ ವಿಷಯ. ಇವತ್ತು ಎಬಿವಿಪಿ ತಮ್ಮ ಮಾಧ್ಯಮ ಮಿತ್ರರ ಜೊತೆ ಸೇರಿ ಪೂರ್ತಿ ವಿಷಯವನ್ನು ತಿರುಚಿಬಿಟ್ಟಿದೆ, ತೆಳುವಾಗಿಸಿಬಿಟ್ಟಿದೆ. ನಿನ್ನೆ ಎಬಿವಿಪಿಯ ಹೇಳ್ತಿದ್ರು ಫೆಲೋಶಿಪ್ಪಿಗೆ ಹೋರಾಟ ನಡೆಸುತ್ತೀವೆಂದು. ಇದು ಎಷ್ಟು ಹಾಸ್ಯಾಸ್ಪದವೆಂದರೆ ಇವರದೇ ಸರಕಾರದ ಮೇಡಂ ಮನು ಸ್ಮತಿ ಇರಾನಿ ಫೆಲೋಶಿಪ್ಪನ್ನು ರದ್ದು ಮಾಡಿಬಿಟ್ಟಿದ್ದಾರೆ. ಇವರೇ ಹೇಳುತ್ತಾರೆ ಫೆಲೋಶಿಪ್ಪಿಗೆ ಹೋರಾಡುತ್ತೇವೆಂದು. ಇವರ ಸರಕಾರ ಉನ್ನತ ಶಿಕ್ಷಣಕ್ಕೆ ಮೀಸಲಿಡುವ ಹಣದಲ್ಲಿ ಶೇ.70 ಕಡಿತಗೊಳಿಸಿಬಿಟ್ಟಿದೆ. ಇದರಿಂದ ನಮ್ಮ ಹಾಸ್ಟೆಲ್ ಕಳೆದ ನಾಲ್ಕು ವರ್ಷಗಳಿಂದ ಪೂರ್ಣವಾಗಿಲ್ಲ. ಇವತ್ತಿನವರೆಗೂ ವೈಫೈ ಕೊಡಲಾಗಿಲ್ಲ.... ಎಬಿವಿಪಿಯ ಜನರು ದೇವಾನಂದನ ತರ ಪೋಸು ಕೊಡುತ್ತಾ ಹಾಸ್ಟೆಲ್ ಕಟ್ಟಿಸುತ್ತೇವೆ, ವೈಫೈ ಕೊಡಿಸುತ್ತೇವೆ, ಫೆಲೋಶಿಪ್ ಕೊಡಿಸುತ್ತೇವೆ ಎಂದು ಹೇಳುತ್ತಾರೆ. ಮೂಲಭೂತ ಹಕ್ಕಿನ ಬಗ್ಗೆ ಚರ್ಚೆಯಾದರೆ ಇವರ ಸತ್ಯಗಳೆಲ್ಲ ಹೊರಗೆ ಬಂದುಬಿಡುತ್ತವೆ.

ಗೆಳೆಯರೇ ನಮಗೆ ಹೆಮ್ಮೆಯಿದೆ ಜೆಎನ್‌ಯು ಬಗ್ಗೆ. ನಾವು ಮೂಲಭೂತ ಹಕ್ಕಿನ ಬಗ್ಗೆ ಚರ್ಚೆ ನಡೆಸುತ್ತೇವೆ. ಇದರ ಬಗ್ಗೆ ಪ್ರಶ್ನೆ ಕೇಳುತ್ತೇವೆ. .......... ಆ ಸ್ವಾಮಿ ಹೇಳ್ತಾರೆ ಜೆಎನ್‌ಯುನಲ್ಲಿ ಜಿಹಾದಿಗಳಿದ್ದಾರೆ. ಜೆಎನ್‌ಯುನಲ್ಲಿರುವ ಜನ ಹಿಂಸೆ ಹಬ್ಬಿಸುತ್ತಾರೆ ಎಂದು. ಜೆಎನ್‌ಯುನಲ್ಲಿರುವ ಆರೆಸ್ಸೆಸ್ ಹಿಂಬಾಲಕರಿಗೆ ನಾನು ಸವಾಲ್ ಹಾಕುತ್ತೇನೆ. ಬನ್ನಿ ಡಿಬೇಟ್ ಮಾಡೋಣ. ಹಿಂಸೆಯ ಬಗ್ಗೆ ಚರ್ಚಿಸೋಣ ........... ಎಬಿವಿಪಿ ನಾಚಿಕೆಯಿಲ್ಲದೆ ಹೇಳುತ್ತೆ ರಕ್ತದ ತಿಲಕ ಮಾಡಿ ಗುಂಡುಗಳಿಂದ ಆರತಿ ಎತ್ತಿ ಎಂದು. ಯಾರ ರಕ್ತ ಹರಿಸಬೇಕೆಂದಿದ್ದೀರಿ ಈ ಮಣ್ಣಿನಲ್ಲಿ? ನೀವು ಗುಂಡು ಹಾರಿಸಿದ್ದೀರಿ, ಬ್ರಿಟಿಷರ ಜೊತೆ ಸೇರಿಕೊಂಡು ಈ ದೇಶದ ಸ್ವಾತಂತ್ರಕ್ಕಾಗಿ ಹೋರಾಡುತ್ತಿದ್ದವರ ಮೇಲೆ ಗುಂಡು ಹಾರಿಸಿದ್ದೀರಿ. ಈ ಮಣ್ಣಿನಲ್ಲಿ ಬಡವರು ಅನ್ನದ ಬಗ್ಗೆ ಮಾತನಾಡಿದಾಗ, ಹಕ್ಕಿನ ಬಗ್ಗೆ ಮಾತನಾಡಿದಾಗ ಅವರ ಮೇಲೆ ಗುಂಡು ಹಾರಿಸುತ್ತೀರಿ. ಮುಸ್ಲಿಮರ ಮೇಲೆ ಗುಂಡು ಹಾರಿಸಿದ್ದೀರಿ. ತಮ್ಮ ಅಧಿಕಾರದ ಬಗ್ಗೆ ಮಹಿಳೆಯರು ಮಾತನಾಡಿದಾಗ ನೀವು ಹೇಳುತ್ತೀರಿ ಐದು ಬೆರಳುಗಳು ಸಮನಾಗಿರುವುದಿಲ್ಲವೆಂದು. ಮಹಿಳೆಯರು ಸೀತೆ ಆಗಿರಬೇಕು ಮತ್ತು ಸೀತೆಯ ತರ ಅಗ್ನಿಪರೀಕ್ಷೆಗೊಳಗಾಗಬೇಕೆಂದು ಹೇಳುತ್ತೀರಿ. ಈ ದೇಶದಲ್ಲಿ ಲೋಕತಂತ್ರವಿದೆ, ಈ ಲೋಕತಂತ್ರ ಎಲ್ಲರಿಗೂ ಸಮಾನ ಹಕ್ಕು ನೀಡುತ್ತದೆ. ಅದು ವಿದ್ಯಾರ್ಥಿಯೇ ಇರಲಿ, ಕರ್ಮಚಾರಿಯೇ ಇರಲಿ, ಬಡವ - ಬಲ್ಲಿದನಿರಲಿ, ಕೂಲಿಯವನಿರಲಿ, ರೈತನಿರಲಿ, ಅಂಬಾನಿಯಿರಲಿ, ಅದಾನಿಯಿರಲಿ ಎಲ್ಲರಿಗೂ ಸಮಾನ ಹಕ್ಕಿದೆ. ಮಹಿಳೆಯ ಸಮಾನತೆಯ ಬಗ್ಗೆ ಮಾತನಾಡಿದರೆ ಹೇಳುತ್ತಾರೆ ಭಾರತೀಯ ಸಂಸ್ಕೃತಿಯನ್ನು ಹಾಳುಮಾಡುತ್ತಿದ್ದಾರೆಂದು. ನಾವು ಹಾಳುಮಾಡಬೇಕೆಂದಿದ್ದೇವೆ, ಶೋಷಣೆಯ ಸಂಸ್ಕೃತಿಯನ್ನು, ಜಾತಿವಾದದ ಸಂಸ್ಕೃತಿಯನ್ನು, ಮನುವಾದ ಮತ್ತು ಬ್ರಾಹ್ಮಣವಾದದ ಸಂಸ್ಕೃತಿಯನ್ನು. .......... ಇವರಿಗೆ ಕಷ್ಟವಾಗುವುದು ಈ ಮಣ್ಣಿನ ಜನರು ಲೋಕತಂತ್ರದ ಬಗ್ಗೆ ಮಾತನಾಡಿದಾಗ, ಲಾಲ್ ಸಲಾಮಿನ ಜೊತೆ ಜನರು ನೀಲಿ ಸಲಾಮ್ ಮಾಡಿದಾಗ, ಮಾರ್ಕ್ಸ್ ಜೊತೆ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರು ತೆಗೆದುಕೊಂಡಾಗ .......... ಇವರ ಹೊಟ್ಟೆಯಲ್ಲಿ ತಳಮಳವೇಳುತ್ತದೆ. ಇವರ ಕುತಂತ್ರವಿದು, ಇವರು ಬ್ರಿಟಿಷರ ಚಮಚಾಗಳು .......... ಹಾಕಿ ದೇಶದ್ರೋಹದ ಕೇಸನ್ನು. ನಾನು ಹೇಳುತ್ತೇನೆ ಆರೆಸ್ಸೆಸ್ ಇತಿಹಾಸ. ಬ್ರಿಟೀಷರ ಜೊತೆಗೆ ನಿಂತ ಇತಿಹಾಸ. ಈ ದೇಶದ್ರೋಹಿಗಳು ಇವತ್ತು ದೇಶಪ್ರೇಮದ ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ನನ್ನ ಮೊಬೈಲ್ ನೋಡಿ ಗೆಳೆಯರೇ ನನ್ನ ತಾಯಿ ಮತ್ತು ತಂಗಿಗೆ ಕೆಟ್ಟಕೆಟ್ಟದಾಗಿ ಬಯ್ದಿದ್ದಾರೆ, ಬಯ್ಯುತ್ತಿದ್ದಾರೆ. ಯಾವ ಭಾರತ ಮಾತೆಯ ಬಗ್ಗೆ ಮಾತನಾಡುತ್ತಿದ್ದೀರಾ? ನಿಮ್ಮ ಭಾರತ ಮಾತೆಯಲ್ಲಿ ನಮ್ಮ ತಾಯಿ ಇಲ್ಲದಿದ್ದರೆ ನನಗೆ ಆ ಭಾರತ ಮಾತೆಯ ಪರಿಕಲ್ಪನೆ ಒಪ್ಪಿತವಲ್ಲ. ಈ ದೇಶದ ಬಡ ಮಹಿಳೆಯರು, ನನ್ನಮ್ಮ ಅಂಗನವಾಡಿಯಲ್ಲಿ ಕೆಲಸಕ್ಕಿದ್ದಾರೆ, ಮೂರು ಸಾವಿರ ರೂ.ಗಳ ಮೇಲೆ ನಮ್ಮ ಕುಟುಂಬ ನಡೆಯುತ್ತದೆ. ಮತ್ತಿವರು ಅವರ ವಿರುದ್ಧ ಬಯ್ಗುಳ ಸುರಿಸುತ್ತಿದ್ದಾರೆ. ಇಂತಹ ದೇಶದ ಬಗ್ಗೆ ನನಗೆ ನಾಚಿಕೆಯಿದೆ. ಈ ದೇಶದೊಳಗಿರುವ ದಲಿತ, ಕಾರ್ಮಿಕ, ರೈತರ ತಾಯಿ ಭಾರತ ಮಾತೆಯಲ್ಲ. ನಾನು ಜೈಕಾರ ಹಾಕುತ್ತೇನೆ, ಭಾರತದ ತಾಯಂದಿರಿಗೆ, ಅಪ್ಪಂದಿರಿಗೆ, ತಾಯಿ ಸಹೋದರಿಯರಿಗೆ ಜೈ, ರೈತ ಕಾರ್ಮಿಕ, ದಲಿತ ಆದಿವಾಸಿಗಳಿಗೆ ಜೈ. ನಿಮ್ಮಲ್ಲಿ ತಾಕತ್ತಿದ್ದರೆ ಹೇಳಿ ಇಂಕ್ವಿಲಾಬ್ ಜಿಂದಾಬಾದ್, ಹೇಳಿ ಭಗತ್ ಸಿಂಗ್ ಜಿಂದಾಬಾದ್, ಹೇಳಿ ಸುಖದೇವ್ ಜಿಂದಾಬಾದ್, ಹೇಳಿ ಅಶ್ಫಾಕುಲ್ಲಾ ಖಾನ್ ಜಿಂದಾಬಾದ್, ಹೇಳಿ ಬಾಬಾ ಸಾಹೇಬ್ ಜಿಂದಾಬಾದ್.

 ನೀವು ಬಾಬಾ ಸಾಹೇಬರ 125ನೆ ವರ್ಷಾಚರಣೆಯನ್ನಾಚರಿಸುವ ನಾಟಕವಾಡುತ್ತೀರಿ. ನಿಮ್ಮಲ್ಲಿ ತಾಕತ್ತಿದೆಯಾ? ಬಾಬಾ ಸಾಹೇಬರು ಜಾತಿವಾದ ಈ ದೇಶದ ದೊಡ್ಡ ಸಮಸ್ಯೆಯೆಂದು ಹೇಳಿದ್ದರು. .......... ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ತೆಗೆದುಕೊಂಡು ಬನ್ನಿ .......... ದೇಶ ಕಟ್ಟುವಿಕೆ ನಡೆಯುವುದು ಅಲ್ಲಿರುವ ಜನರಿಂದ. ಈ ದೇಶದಲ್ಲಿ ಬಡವ - ಕಾರ್ಮಿಕರಿಗೆ ಜಾಗವಿಲ್ಲ........... ನಿನ್ನೆ ಟಿವಿ ಡಿಬೇಟಿನಲ್ಲಿ ದೀಪಕ್ ಚೌರಾಸಿಯಾರವರಿಗೆ ಈ ಮಾತು ಹೇಳುತ್ತಿದ್ದೆ ‘ಇದು ಗಂಭೀರ ಸಮಯವೆಂದು ನೆನಪಿಟ್ಟುಕೊಳ್ಳಿ. ಇದೇ ರೀತಿಯ ಮೂಲಭೂತವಾದ ಮುಂದುವರಿದರೆ ಮಾಧ್ಯಮ ಕೂಡ ಸುರಕ್ಷಿತವಾಗಿರುವುದಿಲ್ಲ. ಸಂಘದ ಆಫೀಸಿನಿಂದ ಸ್ಕ್ರಿಪ್ಟ್ ಬರೆದುಕೊಂಡು ಬರುತ್ತಾರೆ. ಇಂದಿರಾ ಗಾಂಧಿಯ ಸಮಯದಲ್ಲಿ ಕಾಂಗ್ರೆಸ್ ಆಫೀಸಿನಿಂದ ಸ್ಕ್ರಿಪ್ಟ್ ಬರುತ್ತಿದ್ದಂತೆ ಬರುತ್ತದೆ ಎಂದು ನೆನಪಿರಲಿ’ ನೀವು ನಿಜಕ್ಕೂ ಈ ದೇಶದಲ್ಲಿರುವ ದೇಶಭಕ್ತಿಯನ್ನು ತೋರಿಸಬೇಕೆಂದರೆ, ಕೆಲವು ಮಾಧ್ಯಮಮಿತ್ರರು ಹೇಳುತ್ತಿದ್ದರು, ನಮ್ಮ ತೆರಿಗೆ ಹಣದಲ್ಲಿ, ಸಬ್ಸಿಡಿ ಹಣದಲ್ಲಿ ಜೆಎನ್‌ಯು ನಡೆಯುತ್ತಿದೆಯೆಂದು. ಹೌದು ನಿಜ, ತೆರಿಗೆ ಹಣದಲ್ಲಿ, ಸಬ್ಸಿಡಿಯ ಹಣದಲ್ಲಿ ಜೆಎನ್‌ಯು ನಡೆಯುತ್ತಿದೆ ಎನ್ನುವುದು ಸತ್ಯ. ಆದರೊಂದು ಪ್ರಶ್ನೆ ಕೇಳಬಯಸುತ್ತೇನೆ, ಈ ವಿಶ್ವವಿದ್ಯಾನಿಯಲಗಳು ಇರುವುದಾದರೂ ಏತಕ್ಕೆ, ಸಮಾಜದ ಆಗುಹೋಗುಗಳನ್ನು ವಿಶ್ಲೇಷಣೆ ಮಾಡಲು .......... ವಿಶ್ವವಿದ್ಯಾನಿಲಯಗಳು ಇದರಲ್ಲಿ ವಿಫಲವಾದರೆ ದೇಶ ನಿರ್ಮಾಣವಾಗುವುದಿಲ್ಲ. ಆ ದೇಶದಲ್ಲಿ ಜನರ ಭಾಗವಹಿಸುವಿಕೆ ಇರುವುದಿಲ್ಲ .......... ಲೂಟಿ ಮತ್ತು ಶೋಷಣೆಯೇ ಆ ದೇಶದಲ್ಲಿರುತ್ತದೆ. ದೇಶದೊಳಗಿನ ಜನರ ಸಂಸ್ಕೃತಿ, ವಿವಿಧತೆಯನ್ನು ಒಳಗೊಳ್ಳದಿದ್ದರೆ ಆ ದೇಶದ ನಿರ್ಮಾಣವಾಗುವುದಿಲ್ಲ. ನಾವು ದೇಶದ ಜೊತೆಗಿದ್ದೇವೆ. ಭಗತ್ ಸಿಂಗ್ ಮತ್ತು ಬಾಬಾ ಸಾಹೇಬ್ ಅಂಬೇಡ್ಕರರ ಕನಸುಗಳ ಜೊತೆಗಿದ್ದೇವೆ.ಸಮಾನತೆಯ ಹಕ್ಕು ಸಿಗಬೇಕು, ಎಲ್ಲರಿಗೂ ಜೀವಿಸುವ ಹಕ್ಕಿರಬೇಕೆಂಬ ಕನಸಿನ ಜೊತೆಗಿದ್ದೇವೆ .......... ಎಲ್ಲರಿಗೂ ಆಹಾರದ ಹಕ್ಕಿರಬೇಕೆಂಬ ಕನಸಿನ ಜೊತೆಗಿದ್ದೇವೆ. ಆ ಕನಸಿನ ಜೊತೆ ನಿಲ್ಲುವ ಕಾರಣಕ್ಕೆ, ರೋಹಿತ್ ವೇಮುಲಾ ತನ್ನ ಪ್ರಾಣ ನೀಡಿದ್ದಾನೆ. ಈ ಸಂಘಿಗಳಿಗೆ ನಾನು ಹೇಳಬಯಸುತ್ತೇನೆ .......... ರೋಹಿತ್‌ನ ವಿಷಯದಲ್ಲಿ ನೀವು ಮಾಡಿದ್ದನ್ನು ಜೆಎನ್‌ಯು ವಿಷಯದಲ್ಲಿ ನಡೆಯಲು ಬಿಡುವುದಿಲ್ಲ .......... ರೋಹಿತ್‌ನ ತ್ಯಾಗವನ್ನು ನೆನೆಯುತ್ತಾ ನಾವು ಅಭಿವ್ಯಕ್ತಿ ಸ್ವಾತಂತ್ರದ ಪರ ನಿಲ್ಲುತ್ತೇವೆ. ಪಾಕಿಸ್ತಾನದ ವಿಷಯ ಬಿಟ್ಟುಬಿಡಿ, ಬಾಂಗ್ಲಾದೇಶದ ವಿಷಯ ಬಿಟ್ಟುಬಿಡಿ, ನಾವು ಹೇಳುತ್ತೇವೆ ಇಡೀ ಜಗತ್ತಿನ ಬಡವರು ಒಂದು, ಜಗತ್ತಿನ ಕಾರ್ಮಿಕರು ಒಂದು, ಮಾನವೀಯತೆ ಜಿಂದಾಬಾದ್.......... ಮಾನವೀಯತೆಯ ವಿರುದ್ಧ ನಿಂತಿರುವವರಾರೆಂದು ನಾವಿವತ್ತು ಗುರುತಿಸಿಬಿಟ್ಟಿದ್ದೇವೆ. ಜಾತಿವಾದ, ಮನುವಾದ, ಬ್ರಾಹ್ಮಣವಾದದ ಮುಖಗಳನ್ನು ನಾವು ಬಹಿರಂಗಗೊಳಿಸಬೇಕು. ನಿಜವಾದ ಲೋಕತಂತ್ರ ನಿಜವಾದ ಸ್ವಾತಂತ್ರವನ್ನು ದೇಶದಲ್ಲಿ ಸ್ಥಾಪಿಸಬೇಕಾಗಿದೆ ..........ಆ ಸ್ವಾತಂತ್ರ ಬರುವುದು ಸಂವಿಧಾನದಿಂದ, ಲೋಕತಂತ್ರದಿಂದ, ಸಂಸತ್ತಿನಿಂದ ಎಂದು ಹೇಳಲಿಚ್ಛಿಸುತ್ತೇವೆ. ಇದಕ್ಕಾಗಿ ಇಲ್ಲಿರುವ ಕೇಳುಗರಲ್ಲಿ ವಿನಂತಿಸುತ್ತೇನೆ, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ನಾವು ಅಭಿವ್ಯಕ್ತಿ ಸ್ವಾತಂತ್ರಕ್ಕೆ, ನಮ್ಮ ಸಂವಿಧಾನ, ನಮ್ಮ ಭೂಮಿಯ ಏಕತೆಗಾಗಿ ನಾವು ಒಗ್ಗಟ್ಟಿನಿಂದಿರಬೇಕು. ದೇಶ ಒಡೆಯುವ, ಆತಂಕವಾದ ಹರಡುವ ಜನರಿಗೆ ಒಂದು ಪ್ರಶ್ನೆ, ಕೊನೆಯ ಪ್ರಶ್ನೆ ಕೇಳುತ್ತಾ ನನ್ನ ಮಾತು ಮುಗಿಸುತ್ತೇನೆ. ‘ಈ ಕಸಬ್ ಯಾರು? ಅಫ್ಝಲ್ ಗುರು ಯಾರು? ಇಂತಹ ಪರಿಸ್ಥಿತಿಯಲ್ಲಿರುವ ಈ ಜನರು ಯಾರು? ತಮ್ಮ ದೇಹಕ್ಕೆ ಬಾಂಬು ಸಿಕ್ಕಿಸಿಕೊಂಡು ಕೊಲೆ ಮಾಡಲು ತಯಾರಾಗುವ ಈ ಜನರು ಯಾರು? ಈ ಪ್ರಶ್ನೆ ವಿಶ್ವವಿದ್ಯಾನಿಲಯದಲ್ಲಿ ಹುಟ್ಟದಿದ್ದರೆ ವಿಶ್ವವಿದ್ಯಾನಿಲಯಕ್ಕೆ ಅರ್ಥವೇ ಇಲ್ಲ .......... ನಾವು ನ್ಯಾಯವನ್ನು ವ್ಯಾಖ್ಯಾನಿಸದಿದ್ದರೆ, ನಾವು ಹಿಂಸೆಯನ್ನು ವ್ಯಾಖ್ಯಾನಿಸದಿದ್ದರೆ, ಹಿಂಸೆಯೆಂದರೆ ಬಂದೂಕೆತ್ತಿಕೊಂಡು ಕೊಲ್ಲುವುದಷ್ಟೇ ಅಲ್ಲ. ಸಂವಿಧಾನ ದಲಿತರಿಗೆ ಕೊಟ್ಟಿರುವ ಹಕ್ಕನ್ನು ಜೆಎನ್‌ಯು ಆಡಳಿತ ಕೊಡದಿರುವುದೂ ಹಿಂಸೆಯೇ, ವ್ಯವಸ್ಥೆಯ ಹಿಂಸೆ........... ನ್ಯಾಯದ ಮಾತನಾಡುತ್ತೇವೆ, ಯಾರು ನಿರ್ಧರಿಸುತ್ತಾರೆ ಈ ನ್ಯಾಯವೇನೆಂಬುದನ್ನು. ಬ್ರಾಹ್ಮಣವಾದದ ವ್ಯವಸ್ಥೆಯಿದ್ದಾಗ ದಲಿತರನ್ನು ಮಂದಿರದೊಳಗೆ ಬಿಡುತ್ತಿರಲಿಲ್ಲ, ಅದೇ ನ್ಯಾಯವಾಗಿತ್ತು. ಬ್ರಿಟಿಷರಿದ್ದಾಗ ನಾಯಿಗಳಿಗೆ ಮತ್ತು ಭಾರತೀಯರಿಗೆ ಹೋಟೆಲ್‌ಗಳೊಳಗೆ ಬಿಡುತ್ತಿರಲಿಲ್ಲ, ಅದೇ ನ್ಯಾಯವಾಗಿತ್ತು. ಈ ‘ನ್ಯಾಯ’ವನ್ನು ನಾವು ಪ್ರಶ್ನಿಸಿದೆವು ಮತ್ತಿವತ್ತೂ ಎಬಿವಿಪಿ ಮತ್ತು ಆರೆಸ್ಸೆಸ್‌ನ ನ್ಯಾಯವನ್ನು ಪ್ರಶ್ನಿಸುತ್ತೇವೆ.......... ನಿಮ್ಮ ನ್ಯಾಯದಲ್ಲಿ ನಮ್ಮ ನ್ಯಾಯಕ್ಕೆ ಜಾಗವಿರದಿದ್ದರೆ ನಿಮ್ಮ ನ್ಯಾಯವನ್ನು ನಾವು ಮಾನ್ಯ ಮಾಡುವುದಿಲ್ಲ. ನಿಮ್ಮ ಸ್ವಾತಂತ್ರವನ್ನು ನಾವು ಮಾನ್ಯ ಮಾಡುವುದಿಲ್ಲ. ಪ್ರತಿಯೊಬ್ಬನಿಗೂ ಅವನ ಸಾಂವಿಧಾನಿಕ ಹಕ್ಕು ಸಿಕ್ಕ ದಿನ ಸ್ವಾತಂತ್ರ ಮಾನ್ಯ ಮಾಡುತ್ತೇವೆ. ಸಂವಿಧಾನದ ಹಕ್ಕು ಎಲ್ಲರಿಗೂ ಸಿಕ್ಕು ಸಮಾನರಾದ ದಿನ ನ್ಯಾಯವನ್ನು ಒಪ್ಪುತ್ತೇವೆ. ಗೆಳೆಯರೇ ತುಂಬಾ ಗಂಭೀರ ಪರಿಸ್ಥಿತಿಯಿದೆ. ಜೆಎನ್‌ಯುಎಸ್‌ಯು ಯಾವುದೇ ಹಿಂಸೆ, ಆತಂಕವಾದ, ದೇಶದ್ರೋಹದ ಯಾವ ಕೆಲಸವನ್ನೂ ಸಮರ್ಥಿಸುವುದಿಲ್ಲ.......... ಕೆಲವು ಅನಾಮಿಕ ಆಗಂತುಕರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಜೆಎನ್‌ಯುಎಸ್‌ಯು ಅದನ್ನು ಕಠಿಣ ಮಾತುಗಳಲ್ಲಿ ಖಂಡಿಸುತ್ತದೆ. ಜೊತೆಜೊತೆಗೆ ಜೆಎನ್‌ಯು ಆಡಳಿತ ಮತ್ತು ಎಬಿವಿಪಿಗೊಂದು ಸವಾಲು. ಈ ಕ್ಯಾಂಪಸ್ಸಿನಲ್ಲಿ ಸಾವಿರ ತರಹದ ಘಟನೆಗಳು ನಡೆಯುತ್ತವೆ, ಗಮನವಿಟ್ಟು ಎಬಿವಿಪಿಯ ಘೋಷಣೆಗಳನ್ನು ಕೇಳಿಸಿಕೊಳ್ಳಿ, ಅವರು ಹೇಳುತ್ತಾರೆ ಕಮ್ಯುನಿಷ್ಟ್ ನಾಯಿ, ಹೇಳುತ್ತಾರೆ ಅಫ್ಝಲ್ ಗುರುವಿನ........... ಹೇಳುತ್ತಾರೆ ಜಿಹಾದಿಗಳ ಮಕ್ಕಳು........... ಈ ಸಂವಿಧಾನ ನಮಗೆ ನಾಗರಿಕರಾಗುವ ಅಧಿಕಾರ ನೀಡಿದ್ದರೆ ನನ್ನ ತಂದೆಯನ್ನು ನಾಯಿಯೆಂದು ಕರೆಯುವುದು ಸಂವಿಧಾನದ ಹರಣವೇ ಅಲ್ಲವೇ? ಈ ಪ್ರಶ್ನೆ ನಾನು ಎಬಿವಿಪಿಗೆ ಕೇಳುತ್ತೇನೆ. ನೀವು ಯಾರಿಗಾಗಿ ಕೆಲಸ ಮಾಡುತ್ತಿದ್ದೀರೆಂದು ಜೆಎನ್‌ಯು ಆಡಳಿತಕ್ಕೆ ಕೇಳಬಯಸುತ್ತೇನೆ. ಯಾರ ಜೊತೆ ಕೆಲಸ ಮಾಡುತ್ತಿದ್ದೀರಾ? ಮತ್ತು ಯಾವ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೀರಾ? ಇವತ್ತು ಒಂದಂಶ ಸ್ಪಷ್ಟವಾಗಿ ತಿಳಿದುಹೋಗಿದೆ. ಈ ಜೆಎನ್‌ಯು ಆಡಳಿತ ಮೊದಲು ಅನುಮತಿ ಕೊಡುತ್ತದೆ. ನಂತರ ನಾಗಪುರದಿಂದ ಫೋನ್ ಬಂದ ಮೇಲೆ ಅನುಮತಿಯನ್ನು ನಿರಾಕರಿಸಲಾಗುತ್ತದೆ.

ಅನುಮತಿ ಕೊಡುವ ಮತ್ತು ವಾಪಸ್ ತೆಗೆದುಕೊಳ್ಳುವ ಈ ಪ್ರಕ್ರಿಯೆಗಳು ಫೆಲೋಶಿಪ್ ಕೊಡುವ ತೆಗೆದುಕೊಳ್ಳುವ ಪ್ರಕ್ರಿಯೆಯಂತೆಯೇ ಇದೆ. ಫೆಲೋಶಿಪ್ ಜಾಸ್ತಿ ಮಾಡುತ್ತೇವೆಂದು ಘೋಷಣೆ ಮಾಡಲಾಗುತ್ತದೆ ಮತ್ತು ನಂತರ ಫೆಲೋಶಿಪ್ ನಿಲ್ಲಿಸಿಬಿಡಲಾಗುತ್ತದೆ. ಇದು ಸಂಘಿಗಳ ರೀತಿ, ಎಬಿವಿಪಿ ಮತ್ತು ಆರೆಸ್ಸೆಸ್ ರೀತಿ. ಈ ರೀತಿಯಿಂದ ಅವರು ದೇಶ ಮುನ್ನಡೆಸಬೇಕೆಂದಿದ್ದಾರೆ. ಮತ್ತಿದೇ ರೀತಿಯಿಂದ ಜೆಎನ್‌ಯು ಆಡಳಿತವನ್ನು ನಡೆಸಲಿಚ್ಛಿಸಿದ್ದಾರೆ. ಜೆಎನ್‌ಯು ಉಪಕುಲಪತಿಗಳಿಗೆ ನಮ್ಮ ಪ್ರಶ್ನೆಯಿದೆ, ಪೋಸ್ಟರ್ ಹಾಕಲಾಗಿತ್ತು ಗೋಡೆಗಳ ಮೇಲೆ, ಮೆಸ್ಸಿನಲ್ಲಿ; ತೊಂದರೆಯೆನಿಸಿದ್ದರೆ ಅನುಮತಿ ನೀಡಬಾರದಿತ್ತು. ಅನುಮತಿ ಕೊಟ್ಟ ಮೇಲೆ ಯಾರ ಮಾತು ಕೇಳಿ ಅನುಮತಿ ರದ್ದು ಮಾಡಿದಿರಿ? ಈ ವಿಷಯವನ್ನು ಜೆಎನ್‌ಯು ಆಡಳಿತ ಸ್ಪಷ್ಟಪಡಿಸಬೇಕೆಂದು ನಾನು ಕೇಳುತ್ತೇನೆ........... ಜೊತೆಗೆ ಈ ಜನರ ಸತ್ಯಾಂಶವನ್ನು ತಿಳಿದುಕೊಳ್ಳಿ. ಇವರನ್ನು ದ್ವೇಷಿಸಬೇಡಿ. ಯಾಕೆಂದರೆ ದ್ವೇಷಿಸುವುದು ನಮ್ಮ ಗುಣವಲ್ಲ. ಇವರ ಪರಿಸ್ಥಿತಿಯ ಬಗ್ಗೆ ನನ್ನಲ್ಲಿ ದಯೆಯ ಭಾವನೆಯಿದೆ. ಇವರಿಷ್ಟೊಂದು ಕುಣಿಯುತ್ತಿದ್ದಾರೆ ಯಾಕೆ? ಇವರಿಗನ್ನಿಸುತ್ತೆ ಗಜೇಂದ್ರ ಚೌಹಾಣ್‌ರನ್ನು ಕೂರಿಸಿದಂತೆ ಎಲ್ಲ ಕಡೆ ಚೌಹಾಣ್, ದಿವಾನ್, ಫರ್ಮಾನರನ್ನು ಕೂರಿಸ........... ಇವರು ಜೋರಾಗಿ ಭಾರತ ಮಾತಾಕಿ ಜೈ ಎಂದಾಗ ನೀವು ತಿಳಿದುಕೊಂಡುಬಿಡಿ ನಾಳೆ ಅವರಿಗೆ ಕೆಲಸದ ಸಂದರ್ಶನವಿದೆಯೆಂದು.......... ಕೆಲಸ ಸಿಗುತ್ತಿದ್ದಂತೆ ದೇಶಭಕ್ತಿ ಹಿಂದಾಗಿಬಿಡುತ್ತದೆ. ಕೆಲಸ ದಕ್ಕುತ್ತಿದ್ದಂತೆ ಭಾರತ ಮಾತೆಯ ಚಿಂತೆಯಿರುವುದಿಲ್ಲ. ಕೆಲಸ ಸಿಗುತ್ತಿದ್ದಂತೆ........... ತ್ರಿವರ್ಣದ ಧ್ವಜವನ್ನು ಇವರು ಯಾವತ್ತೂ ಮಾನ್ಯ ಮಾಡಿಲ್ಲ. ಅವರಿಗೆ ಭಗವಾ ಧ್ವಜವಷ್ಟೇ ಮುಖ್ಯ. ನಾನು ಸವಾಲು ಹಾಕುತ್ತೇನೆ. ಇದು ಎಂತಹ ದೇಶಭಕ್ತಿ? ಮಾಲಕ ತನ್ನ ನೌಕರನೊಂದಿಗೆ ಸರಿಯಾಗಿ ನಡೆದುಕೊಳ್ಳದಿದ್ದರೆ, ರೈತ ತನ್ನ ಕಾರ್ಮಿಕನೊಂದಿಗೆ ಸರಿಯಾಗಿ ನಡೆದುಕೊಳ್ಳದಿದ್ದರೆ........... ವಿವಿಧ ಚಾನೆಲ್‌ಗಳಲ್ಲಿ ಹತ್ತು ಹದಿನೈದು ಸಾವಿರ ರೂಪಾಯಿಗಳಿಗೆ ಪತ್ರಕರ್ತರ ಕೆಲಸ ಮಾಡುವವರೊಂದಿಗೆ ಅವರ ಸಿಇಒಗಳು ಸರಿಯಾಗಿ ನಡೆದುಕೊಳ್ಳದಿದ್ದರೆ .......... ಇವರ ದೇಶಭಕ್ತಿ ಭಾರತ ಪಾಕಿಸ್ತಾನದ ನಡುವಿನ ಮ್ಯಾಚಿನ ದಫನು ನಡೆಸುತ್ತದೆ. ಹೀಗಾಗಿ ರಸ್ತೆಯಲ್ಲಿ ನಡೆವಾಗ ಬಾಳೆಹಣ್ಣು ಮಾರುವವನೊಂದಿಗೆ ಕೆಟ್ಟದಾಗಿ ಅಹಂಕಾರದಿಂದ ಮಾತನಾಡುತ್ತಾರೆ. ಬಾಳೆಹಣ್ಣಿನವನು ಹೇಳುತ್ತಾನೆ ಒಂದು ಡಜನ್ನಿಗೆ ನಲವತ್ತು ರೂಪಾಯಿ, ಇವರು ಹೇಳುತ್ತಾರೆ ನಡಿ ಅತ್ಲಾಗೆ, ನೀವು ಲೂಟಿ ಮಾಡುತ್ತಿದ್ದೀರಿ ಕಮ್ಮಿಗೆ ನೀಡು. ಬಾಳೆ ಮಾರುವವನು ನೀವೇ ದೊಡ್ಡ ಲೂಟಿಕೋರರು, ಕೋಟ್ಯಂತರ ಲೂಟಿ ಮಾಡಿದ್ದೀರಿ ಎಂದು ತಿರುಗಿಸಿ ಹೇಳಿದರೆ ಅವನನ್ನು ದೇಶದ್ರೋಹಿ ಎಂದುಬಿಡುತ್ತಾರೆ..........

 ಎಬಿವಿಪಿಯ ಅನೇಕರು ನನಗೆ ಪರಿಚಿತರು. ಅವರಲ್ಲಿ ಕೇಳುತ್ತೇನೆ. ನಿಮ್ಮಲ್ಲಿ ನಿಜಕ್ಕೂ ದೇಶಭಕ್ತಿಯ ಭಾವನೆ ಪುಟಿಯುತ್ತದೆಯಾ? ಅವರು ಹೇಳುತ್ತಾರೆ ‘ಏನ್ ಮಾಡೋದಣ್ಣ ಐದು ವರ್ಷದ ಸರಕಾರ, ಎರಡು ವರ್ಷ ಮುಗಿದು ಹೋಗಿದೆ, ಮೂರು ವರ್ಷದ ಟಾಕ್‌ಟೈಮ್ ಉಳಿದಿದೆ. ಏನೆಲ್ಲ ಮಾಡಬೇಕೋ ಅದನ್ನೀಗಲೇ ಮಾಡಿಬಿಡಬೇಕು.’ ನಾನು ಹೇಳಿದೆ ಸರಿ, ಮಾಡಿಕೊಳ್ಳಿ. ಜೆಎನ್‌ಯು ಬಗ್ಗೆ ಸುಳ್ಳು ಹೇಳಿದರೆ ನಾಳೆ ನಿಮ್ಮ ಸಂಗಾತಿಯೇ ನಿಮ್ಮ ಕುತ್ತಿಗೆ ಹಿಡಿದು, ಟ್ರೈನ್‌ನಲ್ಲಿ ಬೀಫ್ ಹುಡುಕುವ ಸಂಗಾತಿ ನಿಮ್ಮ ಕುತ್ತಿಗೆ ಹಿಡಿದು ಹೇಳುತ್ತಾನೆ ‘ನೀನು ಜೆಎನ್‌ಯು ವಿದ್ಯಾರ್ಥಿ. ಹಾಗಾಗಿ ನೀನು ದೇಶದ್ರೋಹಿ’. ಇದರ ಅಪಾಯದ ಅರಿವಿದೆಯಾ ನಿನಗೆ? ಅದಕ್ಕವನು ಹೇಳುತ್ತಾನೆ ‘ಅರ್ಥವಾಗುತ್ತೆ ಅಣ್ಣ. ಇದೇ ಕಾರಣಕ್ಕೆ ನಾವು JNUShutdown ಎಂಬ ಹ್ಯಾಷ್‌ಟ್ಯಾಗನ್ನು ವಿರೋಧಿಸುತ್ತೇವೆ. ನಾನು ಹೇಳಿದೆ ತುಂಬ ಒಳ್ಳೆ ಕೆಲಸ ಸಾಹೇಬರೆ. ಮೊದಲು JNUShutdown ಎಂಬ ಹ್ಯಾಷ್ ಟ್ಯಾಗನ್ನು ಮಾಡಿ ಪ್ರಚಾರ ಮಾಡಿ ನಂತರ ಅದನ್ನು ವಿರೋಧಿಸುತ್ತೀರಿ. ಯಾಕೆಂದರೆ ಜೆಎನ್‌ಯುನಲ್ಲೇ ಇರಬೇಕಲ್ಲವೇ?! ಈ ಕಾರಣಕ್ಕೆ ನಾನು ಜೆಎನ್‌ಯುಗಳಿಗೆ ಹೇಳಲು ಬಯಸುತ್ತೇನೆ. ಮಾರ್ಚ್‌ನಲ್ಲಿ ಚುನಾವಣೆಯಿದೆ. ಎಬಿವಿಪಿಯ ಜನರು ಓಂನ ಬಾವುಟ ತೆಗೆದುಕೊಂಡು ನಿಮ್ಮ ಬಳಿ ಬರುತ್ತಾರೆ. ಆಗವರಿಗೆ ಕೇಳಿ ‘ನಾವು ದೇಶದ್ರೋಹಿಗಳು. ನಾವು ಜಿಹಾದಿಗಳು. ನಾವು ಆತಂಕವಾದಿಗಳು. ನಮ್ಮ ಮತ ತೆಗೆದುಕೊಂಡು ನೀವು ದೇಶದ್ರೋಹಿಗಳಾಗುತ್ತೀರಾ?’ ಇದನ್ನವರಲ್ಲಿ ಖಂಡಿತವಾಗಿ ಕೇಳಿ. ಆಗವರು ಹೇಳುತ್ತಾರೆ ‘ಇಲ್ಲ ಇಲ್ಲ. ನೀವಲ್ಲ. ಯಾರೋ ಕೆಲವರು ಮಾತ್ರ’ ಆಗ ನಾವು ಹೇಳುತ್ತೇವೆ ‘ಅವರು ಕೆಲವರಿದ್ದರು ಎಂದು ನೀವು ಮಾಧ್ಯಮದಲ್ಲಿ ಹೇಳಲಿಲ್ಲ. ನಿಮ್ಮ ಕುಲಪತಿಗಳು ಹೇಳಲಿಲ್ಲ. ನಿಮ್ಮ ರಿಜಿಸ್ಟ್ರಾರ್ ಕೂಡ ಹೇಳುತ್ತಿಲ್ಲ. ಮತ್ತು ಆ ಕೆಲವರೇ ಹೇಳುತ್ತಿದ್ದಾರೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಲಿಲ್ಲವೆಂದು, ಆ ಕೆಲವರೇ ಹೇಳುತ್ತಿದ್ದಾರೆ ನಾವು ಆತಂಕವಾದಿಗಳ ಪಕ್ಷದವರಲ್ಲವೆಂದು. ಆ ಕೆಲವರೇ ಹೇಳುತ್ತಿದ್ದಾರೆ ನಮಗೆ ಅನುಮತಿ ಕೊಟ್ಟ�

Similar News