ಸರಕಾರಿ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಮಾವೇಶ
Update: 2016-02-14 23:42 IST
ಉಡುಪಿ, ಫೆ.14: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ರಕ್ಷಕ-ಶಿಕ್ಷಕ ಸಮಾವೇಶ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಕನ್ನಡ ಸಹ ಪ್ರಾಧ್ಯಾಪಕಿ ಡಾ.ನಿಕೇತನ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಮೋಹನಚಂದ್ರ ನಂಬಿಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ-ರಕ್ಷಕ ಸಂಘದ ಸಂಚಾಲಕ ಪ್ರೊ.ಮಹೇಶ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ವೆಂಕಟೇಶ ಎಚ್.ಕೆ. ಸ್ವಾಗತಿಸಿದರು. ಆಂಗ್ಲ ಸಹ ಪ್ರಾಧ್ಯಾಪಕಿ ಪ್ರೊ.ಉಮಾ ಮಹೇಶ್ವರಿ ಜೆ. ವಂದಿಸಿದರು. ಡಾ.ದುಗ್ಗಪ್ಪಕಜೆಕಾರ್ ಕಾರ್ಯಕ್ರಮ ನಿರೂಪಿಸಿದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸಂಪತ್ ಕುಮಾರ್ ಪಾಂಗಾಳ, ಉಪಾಧ್ಯಕ್ಷರಾಗಿ ದಯಾಶಿನಿ, ಜಂಟಿ ಕಾರ್ಯದರ್ಶಿಯಾಗಿ ವಿಮಲಾ ಜೆ. ಸುವರ್ಣ ಆಯ್ಕೆಯಾದರು.